Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯೋಗಾಭ್ಯಾಸದಿಂದ ಉತ್ತಮ...

ಕಲಬುರಗಿ | ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ: ಶಾಸಕ ಅಲ್ಲಮ ಪ್ರಭು ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ21 Jun 2025 6:43 PM IST
share
ಕಲಬುರಗಿ | ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ: ಶಾಸಕ ಅಲ್ಲಮ ಪ್ರಭು ಪಾಟೀಲ್‌

ಕಲಬುರಗಿ: ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳಷ್ಟು ಮುಖ್ಯವಾಗಿದೆ. ಆದ್ದರಿಂದ ಪ್ರತಿದಿನ ಯೋಗ ಮಾಡುವುದನ್ನು ಜೀವನ ಶೈಲಿಯಾಗಿ ರೂಢಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಮ ಪ್ರಭು ಪಾಟೀಲ್‌ ಹೇಳಿದರು.

ಶನಿವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಆಯುಷ್ ಇಲಾಖೆ, ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಅರುಜೀವಾ ಆಯುರ್ವೇದ ಆಸ್ಪತ್ರೆ (ಸಮಗ್ರ ಚಿಕಿತ್ಸೆ) ಮಾನವಿಯ ಕಲ್ಯಾಣ ಟ್ರಸ್ಟ್, ಕಲಬುರಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ" ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯೋಗೋತ್ಸವ ಕಾರ್ಯಕ್ರಮವನ್ನು " ಸಸಿಗೆ ನೀರೆರೆಯುವ ಮೂಲಕ ಉದ್ಪಾಟಿಸಿ ಮಾತನಾಡಿದರು.

ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಯೋಗವನ್ನು ಮಾಡುವುದನ್ನು ರೂಢಿಸಿಕೊಂಡು ಹೋದರೆ ಬಹಳಷ್ಟು ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ. ದಿನನಿತ್ಯ ಯೋಗ ಮಾಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮಾತನಾಡಿ, ಜೀವನದಲ್ಲಿ ನಾವು ಒತ್ತಡಗಳಿಂದ ಹೊರ ಬರಲು ಪ್ರತಿಯೊಬ್ಬರು ಪ್ರತಿನಿತ್ಯ ಯೋಗ ಮಾಡುವುದನ್ನು ರೂಡಿಸಿಕೊಳ್ಳಬೇಕು. ಯೋಗವನ್ನು ಮಾಡುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯವಿದೆ ಎಂದರು.

ಸುದೀಪ್, ನಾಗರಾಜ, ಶಶಿಕಲ್ ಹಾಗೂ ಡಾ.ಭವಾನಿ ಯೋಗ ಪ್ರಾತ್ಯಕ್ಷತೆ ನಡೆಸಿಕೊಟ್ಟರು. ಪ್ರಭಾರ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಕೆ.ಬಿ. ಬಬಲಾದಿ ಪ್ರಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ಶಿಬಿರವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಮಪ್ರಭು ಪಾಟೀಲ್‌ ಅವರು ಉದ್ಫಾಟಿಸಿದರು. ಇದೇ ವೇಳೆಯಲ್ಲೇ ಜಿಲ್ಲಾಧಿಕಾರಿ, ನಗರ ಪೋಲಿಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರದಲ್ಲಿ 150 ಜನರಿಗೆ ಉಚಿತ ಚಿಕಿತ್ಸೆ ನೀಡಲಾಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಾನವೀಯ ಕಲ್ಯಾಣ ಟ್ರಸ್ಟ್ ಅಧ್ಯಕ್ಷರಾದ ಎಲ್.ಎಸ್.ಪಾಟೀಲ ಶರಣು ಪುಪ್ಪ, ಉಮೇಶ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಪ್ಪ ಕ್ಯಾತನಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೀತಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಅಕ್ಕಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರ್ಯಕಾಂತ ಮದಾನೆ, ಯುವ ಜನಸೇವಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಕಲಬುರಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಜಿಲ್ಲೆಯ ವಿವಿಧ ಯೋಗ ಸಂಘ -ಸಂಸ್ಥೆಗಳ ಸದಸ್ಯರು, ಯೋಗ ಶಿಬಿರಾರ್ಥಿಗಳು, ಆಯುಷ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X