Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಿತ್ತನೆಗೆ ಕ್ರಿಯಾ ಯೋಜನೆ...

Kalaburagi | ಬಿತ್ತನೆಗೆ ಕ್ರಿಯಾ ಯೋಜನೆ ರೂಪಿಸಿಕೊಳ್ಳಿ: ಪಂಕಜ ಕುಮಾರ ಪಾಂಡೆ

ವಾರ್ತಾಭಾರತಿವಾರ್ತಾಭಾರತಿ4 July 2026 7:14 PM IST
share
Kalaburagi | ಬಿತ್ತನೆಗೆ ಕ್ರಿಯಾ ಯೋಜನೆ ರೂಪಿಸಿಕೊಳ್ಳಿ: ಪಂಕಜ ಕುಮಾರ ಪಾಂಡೆ
ಜಿಲ್ಲಾ‌ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ, ಬಿತ್ತನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ) ಸರ್ಕಾರದ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಬಂದ ತಕ್ಷಣ ರೈತರಿಗೆ ಬೀಜ ಮತ್ತು ರಸಗೊಬ್ಬರ ಕೊರತೆ ಉಂಟಾಗದಂತೆ ಅಗತ್ಯ ಪ್ರಮಾಣದ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ನಿರ್ದೇಶಿಸಿದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಮಾರುಕಟ್ಟೆಯಲ್ಲಿ ಬೀಜ ಮತ್ತು ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಜಲಾಶಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಅವರು, ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಬಾವಿ, ಕೊಳವೆಬಾವಿಗಳ ಮೂಲಕ ನೀರು ಪೂರೈಸುವ ಜೊತೆಗೆ, ಕಲಬುರಗಿ ನಗರಕ್ಕೆ ನಾರಾಯಣಪುರ ಜಲಾಶಯದಿಂದ ನೀರು ಹರಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮಾತನಾಡಿ, ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ 1,850 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಗೊಂಡಿದ್ದು, ಸದ್ಯ ನೀರಿನ ಸಮಸ್ಯೆ ಇರುವ ವಾರ್ಡ್‌ಗಳಿಗೆ ಪ್ರತಿದಿನ 160 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೇವಲ ಶೇ.30ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ. ಈಗಾಗಲೇ 20,301 ಕ್ವಿಂಟಲ್ ಬೀಜ ವಿತರಿಸಲಾಗಿದ್ದು, 6,395 ಕ್ವಿಂಟಲ್ ಬೀಜ ಹಾಗೂ 33,725 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.

ಅನ್ಯ ರಾಜ್ಯಗಳಿಗೆ ರಸಗೊಬ್ಬರ ಅಕ್ರಮ ಸಾಗಣೆ ತಡೆಯಲು ಗಡಿ ಚೆಕ್‌ಪೋಸ್ಟ್‌ಗಳಲ್ಲಿ ನಿಗಾ ವಹಿಸಲಾಗಿದೆ. ಇದುವರೆಗೆ 168 ಕೃಷಿ ಪರಿಕರ ಅಂಗಡಿಗಳ ಪರಿಶೀಲನೆ ನಡೆಸಿ, 51 ಅಂಗಡಿಗಳಿಗೆ ನೋಟಿಸ್ ನೀಡಿ, ನಿಯಮ ಉಲ್ಲಂಘಿಸಿದ ನಾಲ್ಕು ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಕಂದಾಯ ಇಲಾಖೆಯ ಪ್ರಗತಿ ವಿವರ ನೀಡಿ, ಜಿಲ್ಲೆಯ ಎಲ್ಲಾ 11 ತಾಲೂಕುಗಳ ಕಂದಾಯ ದಾಖಲೆಗಳ ಗಣಕೀಕರಣ ಪೂರ್ಣಗೊಂಡಿದ್ದು, ಪಹಣಿಗೆ ಆಧಾರ್ ಸೀಡಿಂಗ್ ಶೇ.84.87ರಷ್ಟು ಪೂರ್ಣಗೊಂಡಿದೆ ಎಂದರು.

ಸಭೆಯಲ್ಲಿ ಮಾತನಾಡಿದ ಪಂಕಜ್ ಕುಮಾರ್ ಪಾಂಡೆ, ರಾಜ್ಯ ಸರ್ಕಾರ ಎಐ ತಂತ್ರಜ್ಞಾನದ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿ ಪತ್ತೆಹಚ್ಚುವ ವ್ಯವಸ್ಥೆ ಜಾರಿಗೆ ತರಲಿದ್ದು, ಲ್ಯಾಂಡ್ ಬೀಟ್ ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಅಲ್ಲದೆ, ರಾಷ್ಟ್ರೀಯ ಹೆದ್ದಾರಿಗಳು, ವಿಮಾನ ನಿಲ್ದಾಣ ಹಾಗೂ ಸೂರತ್–ಚೆನ್ನೈ ಕಾರಿಡಾರ್‌ನಂತಹ ಮೂಲಸೌಕರ್ಯಗಳ ಪ್ರಯೋಜನ ಪಡೆದು ಜಿಲ್ಲೆಯಲ್ಲಿ ಕೈಗಾರಿಕಾ ಹೂಡಿಕೆ ಹೆಚ್ಚಿಸಲು ಲ್ಯಾಂಡ್ ಬ್ಯಾಂಕ್ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ‌ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ ಅವರು ಕೃಷಿ ಇಲಾಖೆಯ ಪ್ರಧಾನಮಂತ್ರಿ ಫಸಲ್‌ಬಿಮಾ ಯೋಜನೆಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ್ ಸಂಕನುರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಣ್ಮಣ ಶೃಂಗೇರಿ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ, ತೋಟಗಾರಿಕೆ ಜಂಟಿ ನಿರ್ದೇಶಕ ಸಂತೋಷ ಇನಾಂದಾರ, ಡಿ.ಡಿ.ಪಿ.ಐ ಶಂಕ್ರಮ್ಮ ಢವಳಗಿ, ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ, ಡಿ.ಐ.ಸಿ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸಂಜಯ್ ರೆಡ್ಡಿ, ಸಣ್ಣ ನೀರಾವರಿ, ಕೆ.ಎನ್.ಎನ್.ಎಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X