ಕಲಬುರಗಿ | ಛಲವಾದಿ ನಾರಾಯಣಸ್ವಾಮಿ ಅವರ ಗಡಿಪಾರಿಗೆ ಮಲ್ಲಿಕಾರ್ಜುನ ನೀಲೂರ ಆಗ್ರಹ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಛಲವಾದಿ ನಾರಾಯಣಸ್ವಾಮಿ ಅವರು ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ, ಅವರನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಉಪಾಧ್ಯಕ್ಷ ಮಲ್ಲಿಕಾರ್ಜುನ ನೀಲೂರ ಹೇಳಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರನ್ನು, ಹೈಕಮಾಂಡ್ ಅನ್ನು ಮೆಚ್ಚಿಸಲು ಖರ್ಗೆ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಛಲವಾದಿ ನಾರಾಯಣಸ್ವಾಮಿ ಅವರ ನೀಚ ಬುದ್ಧಿ ಕರ್ನಾಟಕ ಜನತೆಗೆ ಗೊತ್ತಿದೆ ಮತ್ತು ಬಿಜೆಪಿಯ ಸರ್ವ ಮುಖಂಡರು ಮಾಡುತ್ತಿರುವ ಕುತಂತ್ರವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿರುವ ಡೈನಾಮಿಕ್ ಲೀಡರ್ ನಾಯಕರಾಗಿ ಹೊರಹೊಮ್ಮುತ್ತಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.
ಕಲಬುರಗಿ ಜಿಲ್ಲೆ ಅಭಿವೃದ್ಧಿ ಆಗುತ್ತಿರುವುದು ಹಾಗೂ ಉದ್ಯೋಗ ಮೇಳ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಮಾಡುತ್ತಿರುವುದನ್ನು ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.







