ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ: ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಿಲ್ಲತ್ ನಗರದ ಸಮೀಪ ಶನಿವಾರ ರಾತ್ರಿ ನಡೆದಿದೆ.
ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರ ಹಿಂದಿನ ಹೆಸರು ಸುರೇಶ್ ಆಗಿದ್ದು, ವಿವಾಹದ ಬಳಿಕ ಎಂ.ಡಿ ಬಿಲಾಲ್ ಎಂದು ಬದಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ
ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ರಿಯಲ್ ಎಸ್ಟೇಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ನಡೆದ ಸ್ಥಳಕ್ಕೆ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Next Story





