Kalaburagi | ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಸಾಂದರ್ಭಿಕ ಚಿತ್ರ
ಕಲಬುರಗಿ : ಕಲಬುರಗಿ–ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 50ರ ಅವರಾಧ(ಬಿ) ಸೀಮೆಯ ತೋಗರಿ ನಾಡು ಬೋರ್ಡ್ ಸಮೀಪ ರವಿವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳಗಿನ ಜಾವ ಸುಮಾರು 3:30ರಿಂದ 4:10 ಗಂಟೆಯ ನಡುವೆ 55ರಿಂದ 60 ವರ್ಷದೊಳಗಿನ ವ್ಯಕ್ತಿಗೆ ವೇಗವಾಗಿ ಬಂದ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿ ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಸುಮಾರು 5.5 ಅಡಿ ಎತ್ತರ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಸಂಬಂಧ ಕಲಬುರಗಿ ನಗರ ಸಂಚಾರಿ ಪೊಲೀಸ್ ಠಾಣೆ-2ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮೃತ ವ್ಯಕ್ತಿಯ ಕುರಿತು ಮಾಹಿತಿ ಇರುವವರು ಸಂಚಾರಿ ಪೊಲೀಸ್ ಠಾಣೆ-2 ಅಥವಾ ನಗರ ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.




