Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಬಸವರಾಜ ತಳವಾರ
ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಹಂಗನಹಳ್ಳಿ ಗ್ರಾಮದ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ.
ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ ಆತನ ಸಹೋದರ ಸಂಬಂಧಿ ಘೂಳೇಶ ನಡುವೆ ಕೆಲಕಾಲದಿಂದ ಮನಸ್ತಾಪವಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಘೂಳೇಶ ಚಾಕುವಿನಿಂದ ಬಸವರಾಜನಿಗೆ ಮನಬಂದಂತೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದು, ಕೃತ್ಯ ಎಸಗಿದ ಆರೋಪಿ ಘೂಳೇಶ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಸಂಗಮನಾಥ ಹಿರೇಮಠ ಹಾಗೂ ಸಿಪಿಐ ಮಹಾದೇವ ದಿಡ್ಡಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





