Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಿದ್ದರಾಮಯ್ಯ ಮೂರ್ತಿ...

Kalaburagi | ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಸೆ.29ರಂದು ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2026 8:15 PM IST
share
Kalaburagi | ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಸೆ.29ರಂದು ಬೃಹತ್ ಪ್ರತಿಭಟನೆ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಸೆಪ್ಟೆಂಬರ್ 29ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಭಗವಂತರಾಯ್ ಪಾಟೀಲ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.28ರಂದು ಆಯೋಜಿಸಲಾಗಿದ್ದ ‘ಕಲಬುರಗಿ ಚಲೋ’ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಸೆ.29ಕ್ಕೆ ಮುಂದೂಡಲಾಗಿದೆ. ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅನುಮತಿ ನೀಡಿಲ್ಲ. ಮೂರ್ತಿ ಸ್ಥಾಪಿಸಲಾಗಿದ್ದ ಸ್ಥಳದಲ್ಲಿ ‘ಸಿದ್ದರಾಮಯ್ಯ ಸರ್ಕಲ್’ ಎಂಬ ಬ್ಯಾನರ್ ಅಳವಡಿಸಲಾಗಿತ್ತು. ಆದರೆ ಇತ್ತೀಚೆಗೆ ಪಾಲಿಕೆ ಅಧಿಕಾರಿಗಳು ಬ್ಯಾನರ್ ಹಾಗೂ ಮೂರ್ತಿಯನ್ನು ತೆರವುಗೊಳಿಸಿರುವುದು ಖಂಡನೀಯ. ಈ ಕ್ರಮಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಮುಖಂಡ ಬಿ.ಟಿ. ಜಗದೀಶ್ ಮಾತನಾಡಿ, ರಾಜ್ಯದ ವಿವಿಧೆಡೆ ಅನುಮತಿ ಪಡೆಯದೇ ಪ್ರತಿಮೆಗಳನ್ನು ಸ್ಥಾಪಿಸಿರುವ ಉದಾಹರಣೆಗಳಿವೆ. ಆದರೆ ಕಲಬುರಗಿಯಲ್ಲಿ ಅನುಮತಿ ಪಡೆದು ಮೂರ್ತಿ ಸ್ಥಾಪಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ಹೈಕೋರ್ಟ್ ರಸ್ತೆಯಲ್ಲಿ ಸ್ಥಾಪಿಸಿದ್ದ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅವಮಾನಕರ ರೀತಿಯಲ್ಲಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಅದೇ ಸ್ಥಳದಲ್ಲಿ ಮೂರ್ತಿಯನ್ನು ಪುನಃ ಪ್ರತಿಷ್ಠಾಪಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗಣಪತಿ, ಮಲ್ಲಣ್ಣ ಕುರುಡಗಿ, ರಾಯಗೊಂಡ, ನಾಗೇಶ್ ಮುಚ್ಚಕೇಡ, ಅಮೋಘಸಿದ್ದ ಸೇರಿದಂತೆ ಸಂಘದ ಮುಖಂಡರು ಉಪಸ್ಥಿತರಿದ್ದರು.

Tags

protestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X