Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕ್ಯಾನ್ಸರ್ ಗೆಲ್ಲಲು...

Kalaburagi | ಕ್ಯಾನ್ಸರ್ ಗೆಲ್ಲಲು ಮಾನಸಿಕ ಸ್ಥೈರ್ಯ, ಕುಟುಂಬದ ಬೆಂಬಲವೂ ಮುಖ್ಯ: ಡಾ.ಅಮಿತ್ ಕೆ.ಜೋಟ್ವಾನಿ

ವಾರ್ತಾಭಾರತಿವಾರ್ತಾಭಾರತಿ17 Oct 2026 5:26 PM IST
share
Kalaburagi | ಕ್ಯಾನ್ಸರ್ ಗೆಲ್ಲಲು ಮಾನಸಿಕ ಸ್ಥೈರ್ಯ, ಕುಟುಂಬದ ಬೆಂಬಲವೂ ಮುಖ್ಯ: ಡಾ.ಅಮಿತ್ ಕೆ.ಜೋಟ್ವಾನಿ

ಕಲಬುರಗಿ : ಕ್ಯಾನ್ಸರ್ ರೋಗವನ್ನು ಗೆಲ್ಲುವಲ್ಲಿ ವೈದ್ಯಕೀಯ ಚಿಕಿತ್ಸೆಯಷ್ಟೇ ರೋಗಿಯ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹಾಗೂ ಕುಟುಂಬದವರ ಬೆಂಬಲವೂ ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಿಕಂದರಾಬಾದ್‌ನ ಯಶೋದಾ ಆಸ್ಪತ್ರೆಗಳ ಖ್ಯಾತ ಕ್ಯಾನ್ಸರ್ ತಜ್ಞ ಡಾ. ಅಮಿತ್ ಕೆ. ಜೋಟ್ವಾನಿ ಹೇಳಿದರು.

ನಗರದ ಯಶೋದಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಕೆಯಾಗುತ್ತಿರುವ ಅತ್ಯಾಧುನಿಕ ತಂತ್ರಜ್ಞಾನ, ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಹಚ್ಚುವ ಮಹತ್ವ ಹಾಗೂ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಅಗತ್ಯವನ್ನು ವಿವರಿಸಿದರು.

ಭಾರತದಲ್ಲೇ ಮೊದಲ ಬಾರಿಗೆ ಹೈಪರ್‌ಸೈಟ್ ತಂತ್ರಜ್ಞಾನ :

ಯಶೋದಾ ಆಸ್ಪತ್ರೆಯ ವಿಕಿರಣ ಆಂಕಾಲಜಿ ವಿಭಾಗದಲ್ಲಿ ಅತ್ಯಾಧುನಿಕ ‘ಹೈಪರ್‌ಸೈಟ್’ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ. ಭಾರತದಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನವನ್ನು ಸಿಕಂದರಾಬಾದ್‌ನ ಯಶೋದಾ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಇದು ಮಹತ್ವದ ಪ್ರಗತಿಯಾಗಿದೆ ಎಂದು ತಿಳಿಸಿದರು.

ಈ ತಂತ್ರಜ್ಞಾನದ ಮೂಲಕ ಕ್ಯಾನ್ಸರ್ ಕೋಶಗಳಿರುವ ನಿಖರ ಪ್ರದೇಶವನ್ನು ಗುರುತಿಸಿ, ಆ ಭಾಗಕ್ಕೆ ಮಾತ್ರ ವಿಕಿರಣ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಇದರಿಂದ ಸುತ್ತಮುತ್ತಲಿನ ಆರೋಗ್ಯಕರ ಅಂಗಾಂಶಗಳಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡುವುದರ ಜತೆಗೆ, ಚಿಕಿತ್ಸೆಯಿಂದ ಉಂಟಾಗಬಹುದಾದ ಅಡ್ಡಪರಿಣಾಮಗಳನ್ನು ತಗ್ಗಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಈಗಾಗಲೇ ಅನೇಕ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಆರಂಭಿಕ ಪತ್ತೆಯಿಂದ ಗುಣಮುಖರಾಗುವ ಸಾಧ್ಯತೆ ಹೆಚ್ಚು :

ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಮುಖರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಸಾರ್ವಜನಿಕರು ರೋಗದ ಲಕ್ಷಣಗಳ ಬಗ್ಗೆ ಅರಿವು ಹೊಂದಿರಬೇಕು. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಜತೆಗೆ ರೋಗಿಯ ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ಹಾಗೂ ಕುಟುಂಬದವರ ಪ್ರೀತಿ ಮತ್ತು ಬೆಂಬಲ ಅತ್ಯಂತ ಅಗತ್ಯವಾಗಿದೆ. ಕ್ಯಾನ್ಸರ್ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಸ್ಪತ್ರೆಯ ವತಿಯಿಂದ ವಿಶೇಷ ಜಾಗೃತಿ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಸ್ತನ ಕ್ಯಾನ್ಸರ್ ಬಗ್ಗೆ ಭಯಪಡುವ ಬದಲು ಜಾಗೃತರಾಗಿರಬೇಕು. ರೋಗದ ಲಕ್ಷಣಗಳನ್ನು ಗುರುತಿಸುವುದು, ಅಗತ್ಯವಿದ್ದಾಗ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಹಾಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ. ಈ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೇಶವರಾವ ಕುಲಕರ್ಣಿ ಹಾಗೂ ಸತೀಶ್ ಸಿ.ಎಚ್. ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X