Kalaburagi | ಮಿನಿ ಲಾರಿ-ಬೈಕ್ ಮುಖಾಮುಖಿ ಢಿಕ್ಕಿ : ಪೊಲೀಸ್ ಪೇದೆ ಸ್ಥಳದಲ್ಲೇ ಮೃತ್ಯು

ಶ್ರೀಶೈಲ್
ಕಲಬುರಗಿ : ನಗರದ ಹೊರವಲಯದ ಕೇಂದ್ರ ಕಾರಾಗೃಹದ ಎದುರು ಮಿನಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಶೈಲ್ (31) ಎಂದು ಗುರುತಿಸಲಾಗಿದೆ. ಇವರು ಕಲಬುರಗಿ ತಾಲೂಕಿನ ಹಾಗರಗುಂಡಿಗಿ ಗ್ರಾಮದ ನಿವಾಸಿಯಾಗಿದ್ದರು.
ಬುಧವಾರ ಜೇವರ್ಗಿ ತಾಲೂಕಿನಲ್ಲಿರುವ ತಮ್ಮ ಸಹೋದರಿಯ ಮನೆಗೆ ಭೇಟಿ ನೀಡಿ, ಬಳಿಕ ಬೈಕ್ನಲ್ಲಿ ಸ್ವಗ್ರಾಮ ಹಾಗರಗುಂಡಿಗಿಗೆ ಮರಳುತ್ತಿದ್ದ ವೇಳೆ ಕಲಬುರಗಿ ಹೊರವಲಯದ ಕೇಂದ್ರ ಕಾರಾಗೃಹದ ಮುಂಭಾಗದಲ್ಲಿ ಮಿನಿ ಲಾರಿ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೀಶೈಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬMದಿದೆ.
ಈ ಕುರಿತು ಕಲಬುರಗಿಯ ಸಂಚಾರಿ-1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story




