Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಜ್ಯ ಸರ್ಕಾರಕ್ಕೆ ಎರಡು...

ಕಲಬುರಗಿ | ರಾಜ್ಯ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ: ಮಾಹಿತಿ ಮಳಿಗೆ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ4 Jun 2025 3:14 PM IST
share
ಕಲಬುರಗಿ | ರಾಜ್ಯ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ: ಮಾಹಿತಿ ಮಳಿಗೆ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಮಾಹಿತಿ ಮಳಿಗೆ ಪ್ರದರ್ಶನವನ್ನು ಸಚಿವ ಡಾ.ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಉದ್ಘಾಟಿಸಿದರು.

ಈ‌ ವೇಳೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ನಾಡಿನ 7 ಕೋಟಿ ಜನರ ಬದುಕು ಗಟ್ಟಿಗೊಳಿಸಲು ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಚುನಾವಣೆ ಪೂರ್ವ ನೀಡಿದ ಭರವಸೆಯಂತೆ 5 ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ವಿರೋಧ ಪಕ್ಷಗಳು ಸುಖಾ ಸುಮ್ಮನೆ ಆರೋಪ ಮಾಡುವುದನ್ನು ಬಿಟ್ಟು ವಾಸ್ತಾವಂಶ‌ ನೋಡಿ ಮಾತನಾಡಬೇಕು ಎಂದು ಹೇಳಿದರು.

ಕಳೆದ ಎರಡು ವರ್ಷದಲ್ಲಿ ಕೃಷಿ, ಆರೋಗ್ಯ, ಮೂಲಸೌಕರ್ಯ, ವಸತಿ ಕ್ಷೇತ್ರದಲ್ಲಿ ಸಾಧನೆ, ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿಸುವಂತೆ ರೈತಾಪಿ ವರ್ಗಕ್ಕೆ ಯೋಜನೆಗಳು, ಹಿಂದುಳಿದದವರ ಕಲ್ಯಾಣ ಸೇರಿದಂತೆ ಸಾಧನೆ ಪ್ರತಿಬಿಂಬ ಹಾಗೂ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗಾದ ಅನುಕೂಲ, ಪಲಾನುಭವಿಗಳ ಅಭಿಪ್ರಾಯ, ಸರ್ಕಾರ ಇದಕ್ಕೆ ಭರಿಸಿದ ಹಣ ಹೀಗೆ ಸಮಗ್ರ ಮಾಹಿತಿಯನ್ನು ಈ ಮಳಿಗೆ ಹೊಂದಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಸಂದೇಶದೊಂದಿಗೆ ಸಾರ್ಥಕ ಸಂಭ್ರಮದ "ಪ್ರಗತಿಯತ್ತ ಕರ್ನಾಟಕ" ಬಿಂಬಿಸುವ ಈ ಮಾಹಿತಿ ಮಳಿಗೆಗೆ ಸಾರ್ವಜನಿಕರು, ಪ್ರಯಾಣಿಕರು ಭೇಟಿ ನೀಡಿ ವೀಕ್ಷಿಸಬೇಕೆಂದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಪಂಚ ಗ್ಯಾರಂಟಿ ಪ್ರಗತಿ ಕಿರುಹಿತ್ತಿಗೆಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಜೂ.4 ರಿಂದ 10ರ ವರೆಗೆ ಮಾಹಿತಿ ಮಳಿಗೆ ಜನರ ವೀಕ್ಷಣೆಗೆ ಮುಕ್ತವಾಗಿರಲಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ವರೆಗೂ ಸಾರ್ವಜನಿಕರು, ಪ್ರಯಾಣಿಕರು ವೀಕ್ಷಿಸಬಹುದಾಗಿದೆ.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಉಪಾಧ್ಯಕ್ಷ ಸೋಮಶೇಖರ ಹಿರೇಮಠ, ನರಸಿಂಹಲು, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಕಲಬುರಗಿ ವಿಭಾಗ-2ರ ನಿಯಂತ್ರಣಾಧಿಕಾರಿ ಎಸ್.ಜಿ.ಗಂಗಾಧರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿ.ಕೆ.ರಾಜರತ್ನ, ರವಿ ಮಿರಸ್ಕರ್, ಉಮಾಶಂಕರ‌ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಷಾ, ನರಸಿಂಹ, ಅಶೋಕ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X