ಕಲಬುರಗಿ | ಎಸ್.ಎಂ.ಪಂಡಿತ್ ರಂಗಮಂದಿರ ನವೀಕರಣ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಡಿಗಲ್ಲು

ಕಲಬುರಗಿ : ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರ ಸಭಾಂಗಣದ 3.15 ಕೋಟಿ ರೂ. ವೆಚ್ಚದ ನವೀಕರಣ ಕಾಮಗಾರಿಗೆ ಶನಿವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು.
2024-25 ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮ್ಯಾಕ್ರೋ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಂಡಿದ್ದು, ನಿರ್ಮಿತಿ ಕೇಂದ್ರ ನವೀಕರಣದ ಜವಾಬ್ದಾರಿ ಹೊತ್ತಿಕೊಂಡಿದೆ.
ನೆಲ ಮಹಡಿಯಲ್ಲಿ 592 ಮತ್ತು ಮೊದಲನೇ ಮಹಡಿಯಲ್ಲಿ 472 ಅಸನ ಒಳಗೊಂಡಂತೆ 7 ಸ್ಕ್ರೀನ್ ಅಳವಡಿಕೆ, ವಸಲ್ ಪೇಂಟ್, ಎ.ಸಿ. ಅಳವಡಿಕೆ, ಸೌಂಡ್ ಆಂಡ್ ಲೈಟ್ ಸಿಸ್ಟಮ್ ಒಳಗೊಂಡಿದೆ.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಜ್ ಫಾತಿಮಾ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮಹಾನಗರ ಪಾಲಿಕೆ ಮೇಯರ್ ಯಲ್ಲಪ್ಪ ನಾಯ್ಕೋಡಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಇದ್ದರು.







