ಕಲಬುರಗಿ | ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಎಲ್ಲ ಕಡೆಗಳಲ್ಲೂ ಶುಚಿತ್ವ ಕಾಪಾಡಿ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಚಿತ್ತಾಪೂರ ಪಟ್ಟಣದಲ್ಲಿ ಮತ್ತು ಚಿತ್ತಾಪೂರ ಮತಕ್ಷೇತ್ರದ ದಂಡೋತಿ ಗ್ರಾಮದಲ್ಲಿ ಶನಿವಾರ ಐದು ಅಂಗನವಾಡಿ ಕೇಂದ್ರಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿದರು.
2022-23ನೇ ಸಾಲಿನ ಕೆಕೆಆರ್ ಡಿಬಿ ಮೆಗಾ ಮ್ಯಾಕ್ರೋ ಯೋಜನೆಯಡಿಯಲ್ಲಿ ತಲಾ 20 ಲಕ್ಷ ರೂ. ವೆಚ್ಚದಲ್ಲಿ ದಂಡೋತಿ ಗ್ರಾಮದಲ್ಲಿ ಮೂರು ಹಾಗೂ ಚಿತ್ತಾಪುರ ಪಟ್ಟಣದ ಅಂಬೇಡ್ಕರ್ ನಗರ ಮತ್ತು ವಡ್ಡರಗಲ್ಲಿಯಲ್ಲಿ ತಲಾ ಒಂದು ಅಂಗನವಾಡಿ ಕೇಂದ್ರಗಳನ್ನು ಪಿಆರ್ ಇ ಹಾಗೂ ಪಿಡಬ್ಲೂಡಿ ಇಲಾಖೆಗಳು ನಿರ್ಮಿಸಲಾಗಿದೆ.
ಉದ್ಘಾಟಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಂಗನವಾಡಿ ಕೇಂದ್ರಗಳಲ್ಲಿ ತಯಾರಿಸುವ ಅಡುಗೆಯಲ್ಲಿ ಶುಚಿತ್ವ ಹಾಗೂ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ವಿದ್ಯೆ ಕಲಿಸುವುದರ ಜೊತೆಗೆ ಆರೋಗ್ಯದ ಕಡೆಗೆ ವಿಶೇಷ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರಗಳಲ್ಲಿದ್ದ ಚಿಣ್ಣರೊಂದಿಗೆ ಸಚಿವರು ಕೆಲ ಕಾಲ ಸಮಯ ಕಳೆದು ಅವರಿಗೆ ಶುಭ ಹಾರೈಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.







