ಕಲಬುರಗಿ | ʼಜೈ ಶ್ರೀರಾಮ್ʼ ಘೋಷಣೆ ಕೂಗಿ ಭೀಮ್ ಆರ್ಮಿಯ ಕಾರ್ಯದರ್ಶಿಯ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು : ಆರೋಪ

ಕಲಬುರಗಿ : ರಾಜಾಪುರ್ ಶಹಾಬಾದ್ ನ ರಿಂಗ್ ರೋಡ್ ಶಕ್ತಿ ನಗರದಲ್ಲಿರುವ ಭೀಮ್ ಆರ್ಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಮನೆ ಮುಂದೆ ನಿಲ್ಲಿಸಿದ ಫೋರ್ಡ್ ವಿಸ್ಟಾ ಕಾರಿಗೆ ಯಾರೋ ಕಿಡಿಗೇಡಿಗಳು ಶುಕ್ರವಾರ ರಾತ್ರಿ ಬೆಂಕಿ ಹಚ್ಚಿ ʼಜೈ ಶ್ರೀರಾಮ್ʼ ಘೋಷಣೆ ಕೂಗಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ.
ಮೂವರು ಬೈಕಿನಲ್ಲಿ ಬಂದು ಮನೆಯ ಮುಂದೆ ನಿಲ್ಲಿಸಿದ ಕಾರಿಗೆ ಬೆಂಕಿ ಹಚ್ಚಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಭೀಮ್ ಆರ್ಮಿಯ ಕಾರ್ಯದರ್ಶಿ ಸತೀಶ್ ಹುಗ್ಗಿ, ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ವಿರೋಧಿಸಿದಕ್ಕೆ ಆರೆಸ್ಸೆಸ್ ಕಾರ್ಯಕರ್ತರು ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.
ಗುಲ್ಬರ್ಗಾ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





