Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಿಲ್ಲಾ ಮಟ್ಟದ...

ಕಲಬುರಗಿ | ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ8 Dec 2024 5:33 PM IST
share
Photo of Program

ಕಲಬುರಗಿ : ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಹಾಗೂ ಬೆಳಸಿಕೊಂಡು ಹೋಗಲು ಯುವಜನೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅಭಿಪ್ರಾಯಪಟ್ಟರು.

ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಪಂ ವತಿಯಿಂದ ಶನಿವಾರ ಆಯೋಜಿಸಿದ್ದ ʼಜಿಲ್ಲಾ ಮಟ್ಟದ ಯುವಜನೋತ್ಸವʼಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾನಪದ ಸಂಸ್ಕೃತಿ ಉಳಿಸುವಲ್ಲಿ ಈ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ವಿದ್ಯಾರ್ಥಿಗಳಿಗೆ ತಮ್ಮಲ್ಲಿನ ಪ್ರತಿಭೆ ತೋರಿಸಲು ಯುವಜನೋತ್ಸವ ವೇದಿಕೆಯಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಕಾರಣಕ್ಕೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಮಾತನಾಡಿ, ಯುವಜನೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಇತರ ಜಾನಪದ ಕಲೆಗಳನ್ನು ಆಯೋಜಿಸಿ ಪ್ರಜ್ಞಾವಂತ ಯುವ ಕಲಾ ಪ್ರತಿಭೆ ಗುರುತಿಸುವ ಉದ್ದೇಶದಿಂದ ಅವರ ಪ್ರತಿಭೆಗಳನ್ನು ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೆ ಅನಾವರಣಗೊಳಿಸುವುದೇ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚಾಗಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಿಸಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು ಎಂದರು.

ಜಾನಪದ ನೃತ್ಯ, ಜಾನಪದ ಗೀತೆ, (ಗುಂಪು ಮತ್ತು ವೈಯಕ್ತಿಕ), ಭಾಷಣ ಸ್ಪರ್ಧೆ, ಕಥೆ-ಕವಿತೆ ಬರಹ, ಚಿತ್ರಕಲೆ, ಘೋಷಣೆ, ಗುಡಿ ಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ, ಜವಳಿ, ಕೃಷಿ ಉತ್ಪನ್ನಗಳು, ಫೋಟೋಗ್ರಾಫಿ ಸ್ಪರ್ಧೆಗಳಲ್ಲಿ ಸುಮಾರು 150 ವಿದ್ಯಾರ್ಥಿಗಳು ಸ್ಪರ್ಧಿಸಿದ್ದು ಕಂಡು ಬಂತು. ನೃತ್ಯ, ಸಂಗೀತ, ಸಮೂಹ ಗೀತೆ, ನಾಟಕ ಮತ್ತಿತರ ಕಲಾ ಪ್ರಕಾರಗಳನ್ನು ಸ್ಪರ್ಧಿಗಳು ಪ್ರಸ್ತುತಪಡಿಸಿದರು.

ಜಿಪಂ ಸಿಇಒ ಭಂವಾರಸಿoಗ್ ಮೀನಾ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ ಬಡಿಗೇರ, ಪಿ.ಆರ್.ಪಾಂಡು, ಸಂಜಯ ಬಾಣದ, ಪ್ರವೀಣ ಪುಣೆ, ದೇವೆಂದ್ರ ಕರಡಗಿ, ಅಶೋಕ ಎಂ., ಶಿವಾನಂದ ಅಣಜಗಿ ನಿರ್ವಹಿಸಿದರು.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು :

ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಜಾನಪದ ಗೀತೆ ಮಲ್ಲಿಕಾರ್ಜುನ ಮತ್ತು ತಂಡ ಶರಣ ಬಸವೇಶ್ವರ ಕಲಾ ಕಾಲೇಜು(ಪ್ರಥಮ), ಜಾನಪದ ನೃತ್ಯ ಲಕ್ಷ್ಮಿ ಶರಣ ಬಸವೇಶ್ವರ ವಾಣಿಜ್ಯ ಕಾಲೇಜು(ಪ್ರಥಮ), ಜಾನಪದ ಗೀತೆ ವೈಯಕ್ತಿಕ ಸಿಂಧು ಪಾಟೀಲ್ ಶರಣ ಬಸವೇಶ್ವರ ಕಲಾ ಕಾಲೇಜು(ಪ್ರಥಮ), ಜಾನಪದ ನೃತ್ಯ ವೈಯಕ್ತಿಕ ಮಧುಶ್ರೀ ಡಾ.ಅಂಬೇಡ್ಕರ ಪದವಿ ಮಹಾವಿದ್ಯಾಲಯ(ಪ್ರಥಮ), ಭಾಷಣ ಸ್ಪರ್ಧೆ ವೈಯಕ್ತಿಕ ಸಿಮ್ರಾನ್ ಸುಲ್ತಾನ(ಪ್ರಥಮ), ಕವಿತೆ ಬರಹ ವೈಯಕ್ತಿಕ ಸುಷ್ಮಿತಾ ಶಿವಕುಮಾರ(ಪ್ರಥಮ), ಕಥೆ ಬರಹ ವೈಯಕ್ತಿಕ ಆಶಾರಾಣಿ ಸಿ.ಸಿ.ಆಳಂದ(ಪ್ರಥಮ), ಚಿತ್ರಕಲೆ ವೈಯಕ್ತಿಕ ಸಂಜನ ಕಲಬುರಗಿ(ಪ್ರಥಮ), ಛಾಯಾ ಗ್ರಹಣ ವೈಯಕ್ತಿಕ ಮನೋಜ ಕಲಬುರಗಿ(ಪ್ರಥಮ) ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X