Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಷ್ಟ್ರೀಯ ಪಲ್ಸ್ ಪೋಲಿಯೊ...

ಕಲಬುರಗಿ | ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್‌ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Jun 2026 7:51 PM IST
share
ಕಲಬುರಗಿ | ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್‌ ಚಾಲನೆ

ಕಲಬುರಗಿ: ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೊ ಲಸಿಕೆ ನೀಡುವ ಮೂಲಕ ಕಲಬುರಗಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ರವಿವಾರ ಚಾಲನೆ ನೀಡಿದರು.

ನಗರದ ಆಳಂದ ಚೆಕ್‌ಪೋಸ್ಟ್ ಬಳಿಯ ದುಬೈ ಕಾಲೋನಿ ಹತ್ತಿರದ ಶಿವಾಜಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳ ಸಹಯೋಗದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದು ಅತ್ಯಂತ ಅಗತ್ಯವಾಗಿದ್ದು, ಪಾಲಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳಿಗೆ ಲಸಿಕೆ ತಪ್ಪಿಸಬಾರದು ಎಂದು ಕರೆ ನೀಡಿದರು.

ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಮೊದಲ ದಿನ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ. ಜೂನ್ 28 ರಿಂದ ಜುಲೈ 1 ರವರೆಗೆ ದೇಶಾದ್ಯಂತ ಈ ಅಭಿಯಾನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 3,51,716 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 1,519 ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕಾರ್ಯಕ್ಕಾಗಿ 1,453 ತಂಡಗಳು, 132 ಟ್ರಾನ್ಸಿಟ್ ತಂಡಗಳು ಹಾಗೂ 31 ಸಂಚಾರಿ ತಂಡಗಳು ಸೇರಿದಂತೆ ಒಟ್ಟು 1,682 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮೇಲ್ವಿಚಾರಣೆಗೆ 333 ಅಧಿಕಾರಿಗಳು ಹಾಗೂ 3,364 ಲಸಿಕಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರೇಷ್ಮೆ ಉದ್ಯಮಿಗಳ ನಿಗಮದ ಅಧ್ಯಕ್ಷೆ ಹಾಗೂ ವಿಧಾನ ಪರಿಷತ್ ಸದಸ್ಯೆ ಕನೀಜ್ ಫಾತಿಮಾ ಅವರು ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಾಹುಲ್ ಎಸ್. ಸಂಕನೂರ, ಅಪರ ನಿರ್ದೇಶಕಿ ಡಾ. ಪುಷ್ಪ ಎಚ್.ಆರ್., ಜಂಟಿ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ, ಉಪ ನಿರ್ದೇಶಕ ಡಾ. ಶರಣಬಸಪ್ಪ ಗಣಜಲಖೇಡ್, ವಿಶ್ವಸಂಸ್ಥೆ ಪೋಲಿಯೊ ಸರ್ವೇಕ್ಷಣಾಧಿಕಾರಿ ಡಾ. ಅನಿಲಕುಮಾರ ತಾಳಿಕೋಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ರಾಕೇಶ್ ಕಾಂಬಳೆ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಕಾಂತ ನರಿಬೋಳ, ಕುಟುಂಬ ಕಲ್ಯಾಣಾಧಿಕಾರಿ ಡಾ. ವಿವೇಕಾನಂದ ರಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Tags

KalaburagiMLAAllam Prabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X