Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | 2 ಕೋಟಿ ವೆಚ್ಚದ ಶಾದಿ...

ಕಲಬುರಗಿ | 2 ಕೋಟಿ ವೆಚ್ಚದ ಶಾದಿ ಮಹಲ್‌ಗೆ ಶಾಸಕ ಅಲ್ಲಂಪ್ರಭು ಪಾಟೀಲ್ ಅಡಿಗಲ್ಲು

ವಾರ್ತಾಭಾರತಿವಾರ್ತಾಭಾರತಿ9 Aug 2026 10:20 PM IST
share
ಕಲಬುರಗಿ |  2 ಕೋಟಿ ವೆಚ್ಚದ ಶಾದಿ ಮಹಲ್‌ಗೆ ಶಾಸಕ ಅಲ್ಲಂಪ್ರಭು ಪಾಟೀಲ್ ಅಡಿಗಲ್ಲು

ಕಲಬುರಗಿ: ನಗರದ ಹೊರವಲಯದಲ್ಲಿರುವ ಹಜರತ್ ಸೈಯ್ಯದ್ ರುಕ್ಮುದ್ದೀನ್ ತೋಲಾ ದರ್ಗಾ ಬಳಿ ಶಾದಿ ಮಹಲ್ ನಿರ್ಮಾಣಕ್ಕಾಗಿ 2 ಕೋಟಿ ವೆಚ್ಚದ ಯೋಜನೆಗೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ರವಿವಾರ ಅಡಿಗಲ್ಲು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಂಪ್ರಭು ಪಾಟೀಲ್, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಎಲ್ಲ ವರ್ಗದ ಜನರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಸಂಕಲ್ಪವಾಗಿದೆ. 2025-26ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಡಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ರುಕ್ಮುದ್ದೀನ್ ತೋಲಾ ಹಿಂದು–ಮುಸ್ಲಿಂ ಸಾಮರಸ್ಯದ ಪ್ರತೀಕವಾಗಿದೆ. ಇಲ್ಲಿ ಎರಡೂ ಸಮುದಾಯಗಳ ಭಕ್ತರು ಭೇಟಿ ನೀಡಿ ಪೂಜೆ ಹಾಗೂ ಸೇವೆ ಸಲ್ಲಿಸುತ್ತಾರೆ. ವಿಶೇಷವಾಗಿ ಹಿಂದೂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ದರ್ಗಾಕ್ಕೆ ಆಗಮಿಸಿ ಸೇವೆ ಸಲ್ಲಿಸುತ್ತಿರುವುದು ಈ ಕ್ಷೇತ್ರದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಚುನಾವಣೆಯ ಸಂದರ್ಭದಲ್ಲಿ ರುಕ್ಮುದ್ದೀನ್ ತೋಲಾ ಬಳಿ ಶಾದಿ ಮಹಲ್ ನಿರ್ಮಿಸುವ ಭರವಸೆ ನೀಡಿದ್ದೆ. ಇದೀಗ ನೀಡಿದ ಮಾತಿನಂತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರೊಂದಿಗೆ ಇಲ್ಲಿಗೆ ಆಗಮಿಸಿ ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿದ ಅವರು, ರುಕ್ಮುದ್ದೀನ್ ತೋಲಾ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಅನುದಾನ ಒದಗಿಸಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಣೇಶಪೀರ್ ದರ್ಗಾದ ಅನ್ವರ್ ಹುಸೇನ್ ಸಾಬ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರ್, ಮುಖಂಡರಾದ ಇಳಿಯಾಸ್ ಸೇಠ್ ಭಾಗವಾನ್, ಪಾಲಿಕೆ ಸದಸ್ಯ ಅಲಂ ಪಟೇಲ್, ಸಂತೋಷ ಪಾಟೀಲ್ ದಣ್ಣೂರ, ಲಿಂಗರಾಜ, ಇರಫಾನ್ ಪಟೇಲ್, ಚಂದ್ರುಗೌಡ, ರವಿ ಪಾಟೀಲ್, ಎಪಿಎಂಸಿ ಸದಸ್ಯ ವೀರಣ್ಣ ಭಂಗೂರ್, ಲಾಡ್ಲೇಸಾಬ್, ಗಂಗಾಧರ, ಅಜೀಜ್ ಮಿಯಾ, ರಫೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KalaburagiMLAAllamprabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X