Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಳಂದ ಪಟ್ಟಣದ ಮುಖ್ಯ ರಸ್ತೆ...

ಕಲಬುರಗಿ | ಆಳಂದ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣದ ಟೆಂಡರ್‌ಗೆ ಶಾಸಕ ಬಿ.ಆರ್.ಪಾಟೀಲ್‌ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Jun 2025 9:06 PM IST
share
ಕಲಬುರಗಿ | ಆಳಂದ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣದ ಟೆಂಡರ್‌ಗೆ ಶಾಸಕ ಬಿ.ಆರ್.ಪಾಟೀಲ್‌ ಸೂಚನೆ

ಕಲಬುರಗಿ: ಆಳಂದ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕೆ ತಕ್ಷಣ ಅಂದಾಜು ಪಟ್ಟಿ ತಯಾರಿಸಿ, ಟೆಂಡರ್ ಕರೆದು ಕಾಮಗಾರಿಯನ್ನು ತ್ವರಿತಗೊಳಿಸಲು ಶಾಸಕರೂ ಆಗಿರುವ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಆಳಂದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ಸಮ್ಮುಖದಲ್ಲಿ ನಡೆದ ಪುರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಸ್ತೆ ಅಗಲೀಕರಣಕ್ಕೆ 4.90 ಕೋಟಿ ರೂ. ಅನುಮೋದನೆ ಹಂತದಲ್ಲಿದ್ದು, ಇದರಿಂದ ಸಂಚಾರ, ವ್ಯಾಪಾರ ಮತ್ತು ವಹಿವಾಟಿಗೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಶ್ರೀರಾಮ ಮಾರುಕಟ್ಟೆಯ ಹಳೆಯ ಕಟ್ಟಡ ತೆರವಿಗೆ ಮತ್ತು ಮೂರಂತಸ್ತಿನ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮಾತನಾಡಿ, ಇಂದಿರಾ ಕ್ಯಾಂಟಿನ್ ಶೀಘ್ರ ಆರಂಭಕ್ಕೆ ಕ್ರಮ, ಕರ್ತವ್ಯ ಲೋಪದ ಸಿಬ್ಬಂದಿಗಳ ಮೇಲೆ ಕ್ರಮ, ತೆರೆದ ಬಾವಿಗಳ ಸ್ವಚ್ಛತೆ, ಮತ್ತು ಖಾಸಗಿ ಆಸ್ತಿಗಳ ಆನ್‌ಲೈನ್ ನೋಂದಣಿಗೆ ಸೂಚಿಸಿದರು. ಪುರಸಭೆಯ ಆರ್ಥಿಕ ಸ್ಥಿತಿ ಸುಧಾರಣೆಗೆ ಆಸ್ತಿ ತೆರಿಗೆ ವಸೂಲಿಗೆ ಒತ್ತು ನೀಡಲು ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿಗೆ ತಿಳಿಸಿದರು.

ಆಳಂದ ಪಟ್ಟಣದಲ್ಲಿ 10 ದಿನಗಳಿಗೊಮ್ಮೆ ನೀರು ಸರಬರಾಜಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಸಮಸ್ಯೆಗೆ ತಕ್ಷಣ ಪರಿಹಾರಕ್ಕೆ ಡಿಸಿ ಸೂಚನೆ ನೀಡಿದರು.

ಪುರಸಭೆ ಸಿಬ್ಬಂದಿಗಳು ಬಡಾವಣೆ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸದಸ್ಯರು ದೂರಿದರು. ಡಿಸಿ ಮತ್ತು ಶಾಸಕರು, ಅಧಿಕಾರಿಗಳು ಮತ್ತು ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸಿ, ದೂರುಗಳನ್ನು ವಾರದೊಳಗೆ ಇತ್ಯರ್ಥಗೊಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅಣ್ಣಾರಾವ್ ಪಾಟೀಲ, ಪುರಸಭೆ ಅಧ್ಯಕ್ಷ ಫಿರದೋಸ್ ಅನ್ಸಾರಿ, ಉಪಾಧ್ಯಕ್ಷೆ ಕವಿತಾ ಎಸ್.ನಾಯಕ, ನಗರಾಭಿವೃದ್ಧಿ ಅಧಿಕಾರಿ ದವಲಾ, ಪಿಡಬ್ಲೂಡಿ ಎಇಇ ಆನಂದಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ರಂಗಸ್ವಾಮಿ ಶೆಟ್ಟಿ, ಜೆಸ್ಕಾ ಎಇಇ ಪ್ರಭು ಮಡ್ಡಿತೋಟ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X