Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಅಪರಾಧ ತಡೆಗಟ್ಟಲು ನೈತಿಕ...

ಕಲಬುರಗಿ| ಅಪರಾಧ ತಡೆಗಟ್ಟಲು ನೈತಿಕ ಮೌಲ್ಯಗಳು ಅವಶ್ಯ: ಎಸ್.ಎಲ್.ಚವ್ಹಾಣ್‌

ವಾರ್ತಾಭಾರತಿವಾರ್ತಾಭಾರತಿ17 Aug 2025 8:17 PM IST
share
ಕಲಬುರಗಿ| ಅಪರಾಧ ತಡೆಗಟ್ಟಲು ನೈತಿಕ ಮೌಲ್ಯಗಳು ಅವಶ್ಯ: ಎಸ್.ಎಲ್.ಚವ್ಹಾಣ್‌

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ರವಿವಾರ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನ ಹಾಗೂ ಪೌರಕಾರ್ಮಿಕರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಸಮಾರಂಭ ಅತ್ಯಂತ ವಿಜೃಂಭಣೆಯಿoದ ನಡೆಯಿತು.

ಸ್ವಾತಂತ್ರ್ಯ ಹೋರಾಟದ ಹಿಂದೆ ಹಲವು ಹೋರಾಟಗಾರರ ತ್ಯಾಗವಿದೆ. ಅವರ ಸ್ಮರಣೆ ಮಾಡುವ ನಿಟ್ಟಿನಲ್ಲಿ ಎಲೆ ಮರೆಯವ ಕಾಯಿಯಂತಿರುವ ಅನೇಕ ಹೋರಾಟಗಾರರ ಮತ್ತು ಸ್ವಾತಂತ್ರ್ಯ ಚಳವಳಿಯ ಪ್ರಮುಖ ಸನ್ನಿವೇಶಗಳ ಅನಾವರಣ ಪ್ರೇಕ್ಷಕರ ವಿಶೇಷ ಗಮನ ಸೆಳೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ನ್ಯಾಯಾಧೀಶರೂ ಆದ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ಎಸ್.ಎಲ್. ಚವ್ಹಾಣ ಮಾತನಾಡಿ, ಸ್ವಚ್ಚ ಹಾಗೂ ನಿರ್ಭೀತಿ ಹೊಂದಿದ ಸ್ವಾತಂತ್ರ್ಯ ನಮ್ಮ ಬದುಕಿನ ಉಸಿರಾಗಿದೆ. ಈ ದಿಸೆಯಲ್ಲಿ ಸಮಾಜದಲ್ಲಿ ಅಪರಾಧ ತಡೆಗಟ್ಟಲು ಹಾಗೂ ಭಯಮುಕ್ತ ವಾತಾವರಣ ನಿರ್ಮಾಣಕ್ಕಾಗಿ ನೈತಿಕ ಮೌಲ್ಯಗಳ ಅವಶ್ಯಕವಾಗಿವೆ. ಇಂಥ ನೈತಿಕ ಮೌಲ್ಯ ಮತ್ತು ಬದುಕು ನಮ್ಮದಾಗಬೇಕು ಎಂದು ಹೇಳಿದರು.

ನಮ್ಮ ಪೌರ ಕಾರ್ಮಿಕರು ನಿಜವಾದ ಸಮಾಜ ಸೇವಕರು. ಇಂಥ ಸೇವಕರಿಂದಲೇ ನಾವೆಲ್ಲ ರೋಗ ಮುಕ್ತ ಸಮಾಜ ಕಟ್ಟಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕುಡಾದ ವಿಶ್ರಾಂತ ಆಯುಕ್ತ ದಯಾನಂದ ಪಾಟೀಲ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಕಸಾಪ ಕೇಂದ್ರ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿ ಸೈಯ್ಯದ್ ನಜಿರುದ್ದೀನ್ ಮುತ್ತವಲಿ, ಚಿತ್ರಕಲಾವಿದ ಡಾ. ರೆಹಮಾನ್ ಪಟೇಲ್, ಧರ್ಮಣ್ಣ ಎಚ್.ಧನ್ನಿ, ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜಶೇಖರ ಶಾಮಣ್ಣ, ಡಾ.ಎಸ್.ಎಂ.ನೀಲಾ ಮಾತನಾಡಿದರು.

ನಗರದ ಅನೇಕ ಸ್ವಚ್ಚತಾ ರಾಯಭಾರಿಗಳನ್ನು ಪರಿಷತ್ತು ವಿಶೇಷವಾಗಿ ಸತ್ಕರಿಸಿ ಧನ್ಯತಾಭಾವ ಮೆರೆಯಿತು.

ಪ್ರಮುಖರಾದ ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಭುವನೇಶ್ವರಿ ಹಳ್ಳಿಖೇಡ, ಬಾಬುರಾವ ಪಾಟೀಲ, ಮುಹಮ್ಮದ್‌ ಅಯಾಜೋದ್ದೀನ್ ಪಟೇಲ್, ನವಾಬ ಖಾನ್, ಶಿವಾನಂದ ಪೂಜಾರಿ, ಎಂ.ಎನ್. ಸುಗಂದಿ, ಶಿವಾನಂದ ಸುರವಸೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X