Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜೂ.27ರಂದು ಎಂ.ಆರ್....

Kalaburagi | ಜೂ.27ರಂದು ಎಂ.ಆರ್. ವೈದ್ಯಕೀಯ ಕಾಲೇಜಿನ ಅಧ್ಯಾಯ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Jun 2026 8:20 PM IST
share
Kalaburagi | ಜೂ.27ರಂದು ಎಂ.ಆರ್. ವೈದ್ಯಕೀಯ ಕಾಲೇಜಿನ ಅಧ್ಯಾಯ ಘಟಿಕೋತ್ಸವ
140 ಪದವೀಧರರಿಗೆ ಪ್ರಮಾಣಪತ್ರ, 12 ಮಂದಿಗೆ ಚಿನ್ನದ ಪದಕ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯ (ಎಂಆರ್ ಮೆಡಿಕಲ್ ಕಾಲೇಜು) 2020ನೇ ಸಾಲಿನ ‘ಉತ್ಕರ್ಷ್’ ಬ್ಯಾಚ್‌ನ ಘಟಿಕೋತ್ಸವ ಸಮಾರಂಭವು ಜೂನ್ 27ರಂದು ಸಂಜೆ 5 ಗಂಟೆಗೆ ನಗರದ ಸೇಡಂ ರಸ್ತೆಯಲ್ಲಿರುವ ಚಂದ್ರಶೇಖರ ಪಾಟೀಲ ಸ್ಮಾರಕ ಬಾಲಕರ ವಸತಿ ನಿಲಯದ ಮೈದಾನದಲ್ಲಿ ನಡೆಯಲಿದೆ ಎಂದು ಎಚ್‌ಕೆಇ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ಜಿ. ನಮೋಶಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಜೀವನದಲ್ಲಿ ಘಟಿಕೋತ್ಸವವು ಮಹತ್ವದ ಮೈಲಿಗಲ್ಲಾಗಿದ್ದು, ಸಮಾರಂಭದಲ್ಲಿ ಪದವೀಧರರಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ ಭಾಗವಹಿಸಲಿದ್ದು, ವಿಶೇಷ ಅತಿಥಿಯಾಗಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿರಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಡಾ. ಶಶೀಲ್ ಜಿ. ನಮೋಶಿ ವಹಿಸಲಿದ್ದಾರೆ.

ಎಚ್‌ಕೆಇ ಸಂಸ್ಥೆಯ ಉಪಾಧ್ಯಕ್ಷ ರಾಜಾ ಬಿ. ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ ಎಸ್. ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ. ಕೈಲಾಶ್ ಬಿ. ಪಾಟೀಲ, ಎಂಆರ್‌ಎಂಸಿ ಮತ್ತು ಜಿಸಿಎಂ ಸಂಚಾಲಕ ಡಾ. ಶರಣಬಸಪ್ಪ ಆರ್. ಹರವಾಳ, ಬಿಟಿಜಿಎಚ್ ಮತ್ತು ಜಿಸಿಎಂ ಸಂಚಾಲಕ ಡಾ. ಕಿರಣ್ ಎ. ದೇಶಮುಖ್ ಸೇರಿದಂತೆ ಹಲವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾಲೇಜಿನ ಡೀನ್, ಉಪಡೀನ್, ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಘಟಿಕೋತ್ಸವದ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

140 ಮಂದಿಗೆ ಪ್ರಮಾಣಪತ್ರ, 12 ಮಂದಿಗೆ ಚಿನ್ನದ ಪದಕ :

ಘಟಿಕೋತ್ಸವದಲ್ಲಿ ಒಟ್ಟು 140 ಪದವೀಧರರಿಗೆ ಪ್ರಮಾಣಪತ್ರ ವಿತರಿಸಲಾಗುತ್ತಿದ್ದು, ಶೈಕ್ಷಣಿಕ ಸಾಧನೆಗಾಗಿ 12 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ. 2026ರ ಏಪ್ರಿಲ್‌ನಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಕಾಲೇಜು ಶೇ.95.48 ಫಲಿತಾಂಶ ದಾಖಲಿಸಿದ್ದು, 73 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಡಾ. ನಮೋಶಿ ಮಾಹಿತಿ ನೀಡಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಸಂಸ್ಥೆಯ ಶೈಕ್ಷಣಿಕ ವಿಸ್ತರಣೆಯ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಫಿಸಿಯೋಥೆರಪಿ ವಿಭಾಗದಲ್ಲಿ 60 ಸೀಟುಗಳು ಲಭ್ಯವಿದ್ದು, ಅಲೈಡ್ ಹೆಲ್ತ್ ಸೈನ್ಸ್ ವಿಭಾಗದಲ್ಲಿ ಆರು ಹೊಸ ಶಾಖೆಗಳನ್ನು ಆರಂಭಿಸಲಾಗಿದೆ. 2025ರಲ್ಲಿ 26 ಸ್ನಾತಕೋತ್ತರ (ಪಿಜಿ) ಸೀಟುಗಳು ಸೇರ್ಪಡೆಯಾಗಿದ್ದು, ಹೆಚ್ಚುವರಿಯಾಗಿ 50 ಎಂಬಿಬಿಎಸ್ ಹಾಗೂ 19 ಪಿಜಿ ಸೀಟುಗಳ ಅನುಮೋದನೆಗಾಗಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟಾರೆ ಮುಂಬರುವ ದಿನಗಳಲ್ಲಿ ಸಂಸ್ಥೆಗೆ 250ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X