Kalaburagi | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ

ಸಾಂದರ್ಭಿಕ ಚಿತ್ರ | PC : Gemini AI
ಅಫಜಲಪುರ : ವ್ಯಕ್ತಿಯೊಬ್ಬರನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆಗೈದ ಘಟನೆ ತಾಲೂಕಿನ ಚೌಡಾಪುರ ಗ್ರಾಮದ ಸಮೀಪ ರವಿವಾರ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41) ಎಂದು ಗುರುತಿಸಲಾಗಿದೆ.
ಚೌಡಾಪುರ ಗ್ರಾಮದ ಮುಖ್ಯರಸ್ತೆ ಪಕ್ಕದ ಜಮೀನಿನಲ್ಲಿ ಈ ಕೃತ್ಯ ನಡೆದಿದ್ದು, ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಣಗಾಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಬಲೆ ಬೀಸಿದ್ದಾರೆ.
Next Story




