ಕಲಬುರಗಿ | ಚಿಂಚೋಳಿಯಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ ; ಫೋಟೊ ವೈರಲ್

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಬೆನಕನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶುಕ್ರವಾರ ಬೆಳಗ್ಗೆ ರಾಷ್ಟ್ರಧ್ವಜವನ್ನು ಹಾರಿಸುವ ವೇಳೆ ತಲೆ ಕೆಳಗಾಗಿ ಹಾರಿಸಲಾಗಿದೆ. ಈ ಕುರಿತು ಸ್ಥಳೀಯರು ಫಟೋ ತೆಗೆದು ಅಲ್ಲಿನ ತಹಶೀಲ್ದಾರ್ ಅವರಿಗೆ ಕಳುಹಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ.
ಘಟನೆ ಕುರಿತಾಗಿ ಮಾಹಿತಿ ಚಿಂಚೋಳಿ ತಹಶೀಲ್ದಾರ್ ಅವರಿಗೆ ತಲುಪಿದ ಬೆನ್ನಲ್ಲೇ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರೆ ಮಾಡಿ, ಕಾರಣ ಕೇಳಿ ನೋಟಿಸ್ ನೀಡುವಂತೆ ತಿಳಿಸಿದ್ದಾರೆ.
ಅದರಂತೆಯೇ ಅಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೆನಕನಹಳ್ಳಿಯ ನಮ್ಮೂರು ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಕೊಟ್ಟಿದ್ದು, ಮೂರು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
Next Story





