Kalaburagi | ರಾಷ್ಟ್ರೀಯ ಲೋಕ ಅದಾಲತ್: 179 ಪ್ರಕರಣ ಇತ್ಯರ್ಥ, 4.93 ಕೋಟಿ ರೂ. ಪರಿಹಾರಕ್ಕೆ ಆದೇಶ

ಕಲಬುರಗಿ, ಸೆ.20: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಂಧಾನದ ಮೂಲಕ 179 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು 4,93,75,993 ರೂ. ಪರಿಹಾರ ಸಂತ್ರಸ್ತರಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಕಲಬುರಗಿ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಆಯೋಜಿಸಿದ್ದ ಲೋಕ ಅದಾಲತ್‌ನಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ನ್ಯಾ. ಅಶೋಕ್ ಎಸ್. ಕಿಣಗಿ ಮತ್ತು ನ್ಯಾ. ಶೃಂಗೇಶ್ ಎಂ. ಭಾಗವಹಿಸಿ ಮೋಟಾರು ವಾಹನ ವಿಮೆ ಹಾಗೂ ಕೌಟುಂಬಿಕ ಪ್ರಕರಣಗಳ ವಾದಿ-ಪ್ರತಿವಾದಿಗಳ ಸಮ್ಮುಖದಲ್ಲಿ ಸಂಧಾನ ನಡೆಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿದರು.
ಈ ಕುರಿತು ಮಾಹಿತಿ ನೀಡಿರುವ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಕುಮಾರ ಡಿ.ಕೆ., ಸಂಧಾನದ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಮೂಲಕ ಸಂತ್ರಸ್ತರಿಗೆ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Next Story




