Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜೂ.28ರಂದು ರಾಷ್ಟ್ರೀಯ...

Kalaburagi | ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 May 2026 7:11 PM IST
share
Kalaburagi | ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂನ್ 28ರಂದು ನಡೆಯಲಿದ್ದು, 0ರಿಂದ 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಹೆದ್ದಾರಿ ಚೆಕ್‌ಪೋಸ್ಟ್‌ಗಳಂತಹ ‘ಹೈ ರಿಸ್ಕ್’ ಪ್ರದೇಶಗಳಲ್ಲಿ ತೀವ್ರ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೂನ್ 28ರಂದು ಜಿಲ್ಲೆಯಾದ್ಯಂತ ವಿವಿಧ ಬೂತ್‌ಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ನಂತರ ಜೂನ್ 29, 30 ಹಾಗೂ ಜುಲೈ 1ರಂದು ಮನೆ ಮನೆಗೆ ಭೇಟಿ ನೀಡುವ ಮೂಲಕ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆಹಚ್ಚಿ ಲಸಿಕೆ ನೀಡಲು 1,475 ತಂಡಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಒಂದು ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಬಾರಿ ಜಿಲ್ಲೆಯಲ್ಲಿ 5 ವರ್ಷದೊಳಗಿನ ಅಂದಾಜು 3,51,716 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟು 1,519 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, 3,364 ಸಿಬ್ಬಂದಿ ಹಾಗೂ 334 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜೊತೆಗೆ 132 ಟ್ರಾನ್ಸಿಟ್ ತಂಡಗಳು ಮತ್ತು ದೂರದ ಪ್ರದೇಶಗಳಿಗಾಗಿ 31 ಸಂಚಾರಿ ತಂಡಗಳು ಕಾರ್ಯನಿರ್ವಹಿಸಲಿವೆ. ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ವಲಸೆ ಕಾರ್ಮಿಕರು ಮತ್ತು ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ವಿಶೇಷ ಮೈಕ್ರೋ ಪ್ಲಾನ್ ಸಿದ್ಧಪಡಿಸಬೇಕು. ಕೊಳಗೇರಿ ಪ್ರದೇಶಗಳು, ಇಟ್ಟಿಗೆ ಭಟ್ಟಿಗಳು ಹಾಗೂ ವಲಸೆ ಕಾರ್ಮಿಕರ ವಸತಿ ಪ್ರದೇಶಗಳ ಮೇಲೆ ವಿಶೇಷ ನಿಗಾವಹಿಸಿ, ಉನ್ನತಾಧಿಕಾರಿಗಳ ತಂಡಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ರಾಷ್ಟ್ರೀಯ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಕರಪತ್ರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಶಿಕ್ಷಣ, ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಟ್ಟಡ ಕಾರ್ಮಿಕ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಡಿಎಚ್‌ಒ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಸರ್ಜನ್ ಡಾ. ರುಖಿಯಾ ಅಸನಾ ರಬ್, ಆರ್‌ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

KalaburagiPulse Polio
share
ವಾರ್ತಾಭಾರತಿ
ವಾರ್ತಾಭಾರತಿ
Next Story
X