ಕಲಬುರಗಿ | ಅಖಿಲ ಭಾರತೀಯ ಕೋಲಿ ಸಮಾಜದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆ ನೂತನ ಸದಸ್ಯರ ನೇಮಕ

ಕಲಬುರಗಿ: ಅಖಿಲ ಭಾರತೀಯ ಕೋಲಿ ಸಮಾಜದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆ ಮಾಲಾ ಬಿ. ನಾರಾಯಣರಾವ್ ಹಾಗೂ ದತ್ತರಾಜ ಶಿವಲಿಂಗಪ್ಪ ಕಿನ್ನೂರ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಅಖಿಲ ಭಾರತೀಯ ಕೋಲಿ ಸಮಾಜದ ಕರ್ನಾಟಕ ರಾಜ್ಯಾಧ್ಯಕ್ಷ ದತ್ತಾತ್ರೇಯ ರೆಡ್ಡಿ ಮುದಿರಾಜ್ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ವೀರೇಂದ್ರ ಕಶ್ಯಪ್ ಅವರು ಈ ನೇಮಕವನ್ನು ಮಾಡಿದ್ದಾರೆ.
ಈ ಕುರಿತ ಮಾಹಿತಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅವಂಟಿ ಹಾಗೂ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕೆ ಚಿಗರಳ್ಳಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





