Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜೆಡಿಎಸ್ ಗ್ರಾಮೀಣ...

Kalaburagi | ಜೆಡಿಎಸ್ ಗ್ರಾಮೀಣ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ8 Aug 2026 6:09 PM IST
share
Kalaburagi | ಜೆಡಿಎಸ್ ಗ್ರಾಮೀಣ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಜಿಲ್ಲಾ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ನೂತನ ಪದಾಧಿಕಾರಿಗಳಿಗೆ ಶನಿವಾರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಜಿಲ್ಲಾಧ್ಯಕ್ಷ ಬಾಲರಾಜ ಎ. ಗುತ್ತೇದಾರ ಅವರ ಆದೇಶದ ಮೇರೆಗೆ, ಗ್ರಾಮೀಣ ಮತಕ್ಷೇತ್ರದ ಅಧ್ಯಕ್ಷ ಗಂಗಾಧರ ಆರ್. ಪಂಚಾಳ ಅಂಬಲಗಾ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

ಸಂಜೀವಕುಮಾರ ಮಡಕಿ ಅವರನ್ನು ಕಾರ್ಯಾಧ್ಯಕ್ಷರಾಗಿ, ಅಣ್ಣಪ್ಪ ಶಿರಗಾಪೂರ ವಿ.ಕೆ. ಸಲಗರ, ಪ್ರಕಾಶ ಗೋನೆಕಿ ಅಂಬಲಗಾ, ರಾಜೇಂದ್ರ ಜಿ. ರೊಳೆ ಹಾಗೂ ವೀರಂತಪ್ಪ ಆರ್. ಲಿಂಗನಾಯಕ ಅವರನ್ನು ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರಮಜಾನ ಬಿ. ಮುದ್ದಡಗಾ ಅವರನ್ನು ಮಹಾಪ್ರಧಾನ ಕಾರ್ಯದರ್ಶಿಯಾಗಿ, ಪ್ರಕಾಶ ದೊಡ್ಡಮನಿ ತೆಗನೂರ ಹಾಗೂ ದೇವಿಂದ್ರ ಎ. ಅಂಬಲಗಾ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ, ಬಂಡಪ್ಪ ಡಿ. ಸಂಗೋಳಗಿ ಅವರನ್ನು ಉಪಾಧ್ಯಕ್ಷರಾಗಿ, ಬಾಬುರಾವ ಹೆಚ್. ಬಿರಾದಾರ ಅವರನ್ನು ಸಹ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ, ಗ್ರಾಮೀಣ ಮತಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಯುವಘಟಕ ಅಧ್ಯಕ್ಷ ಪ್ರವೀಣ ಎಲ್. ಮಾತನಾಡಿ, ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗ್ರಾಮೀಣ ಭಾಗದಲ್ಲಿ ಜೆಡಿಎಸ್‌ಗೆ ಮತ್ತಷ್ಟು ಬಲ ತುಂಬಬೇಕು. ನೂತನ ಪದಾಧಿಕಾರಿಗಳು ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಕಟ್ಟಬೇಕು ಎಂದರು.

ಚಂದ್ರಕಾಂತ ಮೋರೆ ಮಾತನಾಡಿ, ನೂತನ ಪದಾಧಿಕಾರಿಗಳ ನೇಮಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ನೀಡಲಿದೆ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಬಲಪಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಅಧ್ಯಕ್ಷ ನಾಗೇಶ ಹೆಬ್ಬಾಳ, ಜಿಲ್ಲಾ ಸಂಚಾಲಕ ಶಿವಲಿಂಗಪ್ಪ ಪಾಟೀಲ್ ಸೇರಿದಂತೆ ಪಕ್ಷದ ಅನೇಕ ಮುಖಂಡರು, ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X