Kalaburagi | ಉದನೂರ ಸರ್ಕಾರಿ ಶಾಲೆಗೆ ನೂತನ ಎಸ್‌ಡಿಎಂಸಿ ರಚನೆ

ಕಲಬುರಗಿ : ತಾಲೂಕಿನ ಉದನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ರಚಿಸಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಮಹಾಂತೇಶ್ ಎಸ್. ಪೊಲೀಸ್ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಬಸ್ಸಮ್ಮ ಜಾಪುರ್ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಸ್‌ಡಿಎಂಸಿ ಸದಸ್ಯರು ಸಕ್ರಿಯವಾಗಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಇಂದುಭಾಯಿ, ಶಿವಪುತ್ರ ಪಾಟೀಲ್, ಶಾಂತಕುಮಾರ್ ಬಿರಾದಾರ, ಅರವಿಂದ್ ಮಾಲಿ ಪಾಟೀಲ್ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪಾಲಕರು ಉಪಸ್ಥಿತರಿದ್ದರು.
ಈ ವೇಳೆ ಜೈ ಭೀಮ್ ಕೊರಳಿ, ಪುನೀತ್ ಕೊರಳಿ, ಶರಣು ಚನ್ನಮಳ್ಳಿ, ಬಾಜಿರಾಯ ಕೊರಳಿ, ಸುಶೀಲ್ ಕೊರಳಿ, ಅಯ್ಯೋಭ, ಸಂಜು ಕೋಳಕೂರ್, ಶರಣಪ್ಪ ಶಿರಸಿಗೆ, ಯಂಕಣ್ಣ ಸೇರಿದಂತೆ ಅನೇಕ ಗ್ರಾಮಸ್ಥರು ಹಾಗೂ ಪಾಲಕರು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.




