ಕಲಬುರಗಿ: ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ಅನಸೂಯಾ ಅವಿನಾಶ್ ಆಕಡೆ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.
ಮದುವೆಯ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾ ಬೇಸರಗೊಂಡಿದ್ದಳು ಎನ್ನಲಾಗಿದ್ದು, ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





