Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬೆಳೆ ವಿಮೆ ಶೂನ್ಯ ದಾಖಲೆ...

ಕಲಬುರಗಿ | ಬೆಳೆ ವಿಮೆ ಶೂನ್ಯ ದಾಖಲೆ ಖಂಡಿಸಿ ನಿರಗುಡಿ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 March 2025 11:17 PM IST
share
Photo of Letter of appeal

ಕಲಬುರಗಿ : ಬೆಳೆ ನಷ್ಟವಾದರು ಬೆಳೆ ವಿಮೆ ಆ್ಯಪ್ ನಲ್ಲಿ ನಷ್ಟ ಶೂನ್ಯ ಎಂದು ದಾಖಲಿಸಿರುವ ಕ್ರಮವನ್ನು ಖಂಡಿಸಿ ತಾಲೂಕಿನ ನಿರಗುಡಿ ಗ್ರಾಪಂ ವ್ಯಾಪ್ತಿಯ ರೈತರು ಪಟ್ಟಣದ ತಾಲೂಕು ಆಡಳಿತಸೌಧ ಮುಂಭಾಗದಲ್ಲಿ ಮಿಂಚಿನ ಪ್ರತಿಭಟನೆ ಕೈಗೊಂಡು ಬುಧವಾರ ಆಕ್ರೋಶ ಹೊರಹಾಕಿದರು.

ಆಳಂದ ತಾಲೂಕಿನ ನಿರಗುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟಕಿ, ನಿರಗುಡಿ ಮತ್ತು ತೀರ್ಥ ಗ್ರಾಮಗಳಲ್ಲಿ ಸುಮಾರು 3,000ಕ್ಕೂ ಹೆಚ್ಚು ರೈತರು ತಮ್ಮ ಉದ್ದು, ಹೆಸರು, ತೊಗರಿ, ಉಳ್ಳಾಗಡಿ ಮುಂತಾದ ಬೆಳೆಗಳಿಗೆ ವಿಮೆ ಮಾಡಿಸಿದ್ದರು. ಆದರೆ, ಅಧಿಕ ಮಳೆ, ನೆಟೆ ರೋಗ ಹಾಗೂ ನೈಸರ್ಗಿಕ ವಿಕೋಪಗಳಿಂದ ಬೆಳೆಗಳು ಹಾಳಾದರೂ, ಸಂರಕ್ಷಣೆ ಆಪ್ ನಲ್ಲಿ ಈ ಗ್ರಾಮಗಳ ಬೆಳೆ ವಿಮೆಯನ್ನು "ಶೂನ್ಯ" ಎಂದು ತೋರಿಸಲಾಗಿದೆ ಎಂದು ವ್ಯವಸ್ಥೆಯ ಕ್ರಮವನ್ನು ಖಂಡಿಸಿದರು.

ಸರ್ವೇ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡದೆ, ಕಚೇರಿಯಿಂದಲೇ ಸರ್ವೇ ಮಾಡಿ ಈ ತಪ್ಪು ವರದಿ ಸಲ್ಲಿಸಿದ್ದಾರೆ. ರೈತರು ತಮ್ಮ ಬೆಳೆ ನಷ್ಟಕ್ಕೆ ಸೂಕ್ತ ವಿಮೆ ಮಂಜೂರಾತಿ ಹಾಗೂ ಬೇಜವ್ದಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

"ಹೊಲಗಳಲ್ಲಿ ನಮ್ಮ ಬೆಳೆ ಹಾಳಾಗಿದೆ, ಆದರೆ ಕಾಗದದಲ್ಲಿ ಎಲ್ಲವೂ ಸರಿ ಎಂದು ತೋರಿಸಲಾಗಿದೆ. ಇದು ರೈತರೊಂದಿಗೆ ಮಾಡುತ್ತಿರುವ ಅನ್ಯಾಯ". ಕೂಡಲೇ ನಷ್ಟವಾದ ಬೆಳೆಗೆ ವಿಮೆ ಪಾವತಿಸಬೇಕು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ, ರೈತರಿಗೆ ನ್ಯಾಯ ಒದಗಿಸಬೇಕು ಎಂದು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಅಣ್ಣಾರಾವ್ ಪಾಟೀಲ ಅವರು, ಈ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಅನುಸರಿಸಲಾಗುವುದು ಕಾಲಾವಕಾಶ ನೀಡಬೇಕು ಎಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ನಿರಗುಡಿ ಪಿಕೆಪಿಎಸ್ ಅಧ್ಯಕ್ಷ ಆನಂದ ಎಸ್. ದೇಶಮುಖ, ಉಪಾಧ್ಯಕ್ಷ ಶಾಂತಪ್ಪ ಪಾಟೀಲ ತೀರ್ಥ, ಸಿದ್ಧಣ್ಣರಾವ್ ದೇಶಮುಖ, ಗ್ರಾಪಂ ಮಾಜಿ ಅಧ್ಯಕ್ಷ ಪಿಂಟು ಪಾಟೀಲ, ಸಿದ್ಧರಾಮ ಜಿ. ಬೆಳಮಗಿ, ಸಿದ್ಧರಾಮ ಬಿ.ಮುದಗಡೆ,ಅಪ್ಪಾರಾವ್ ದೇಶಮುಖ, ಸುಭಾಷ ಪಾಟೀಲ, ಗುಜಾರಲಾಲ ಪಾಟೀಲ, ರಾಮ ಪಾರಾಣೆ, ಹಣಮಂತರಾವ್ ಸರಾಟೆ, ಸಿದ್ಧರಾಮ ಬಂಡಗಾರ ಸೇರಿದಂತೆ ತೀರ್ಥ, ಮಟಕಿ ಮತ್ತು ನಿರಗುಡಿ ಗ್ರಾಮದ ರೈತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X