ಕಲಬುರಗಿ | ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ಕುಸನೂರು ಗ್ರಾಮಕ್ಕೆ ಭೇಟಿ ; ಸಮಸ್ಯೆ ಆಲಿಕೆ

ಕಲಬುರಗಿ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಕಲಬುರಗಿ ತಾಲೂಕಿನ ಕುಸನೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಬುಡ್ಗಜಂಗಮ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ನಂತರ ಕಲಬುರಗಿ ನಗರದ ರಾಣೇಶಪೀರ್ ದರ್ಗಾ ಆಶ್ರಯ ಕಾಲೋನಿಯಲ್ಲಿ ವಾಸಿಸಿರುವ ಪರಿಶಿಷ್ಟ ಜಾತಿಯ ಅಲೆಮಾರಿ ಬುಡ್ಗಜಂಗಮ ಸಮುದಾಯದ ಕುಟುಂಬಗಳನ್ನು ಮತ್ತು ತಾಲೂಕಿನ ಶರಣಶಿರಸಗಿ ಗ್ರಾಮದಲ್ಲಿನ ಅಂಬೇಡ್ಕರ್ ಕಾಲೊನಿಯಲ್ಲಿರುವ ಅಲೆಮಾರಿ ಸಮುದಾಯ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಕಿವಿಯಾದರು.
ಕಲಬುರಗಿ ತಹಶೀಲ್ದಾರ ಕೆ.ಆನಂದಶೀಲ, ತಾಲೂಕು ಪಂಚಾಯತ್ ಇ.ಓ ಸೈಯದ್ ಪಟೇಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ್, ಮಹಾನಗರ ಪಾಲಿಕೆ ವಲಯ ಆಯುಕ್ತ ರಮೇಶ ಪಟ್ಟೆದಾರ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
Next Story





