Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಿಲ್ಲಾ, ತಾಲೂಕು ಮಟ್ಟದ...

ಕಲಬುರಗಿ | ಜಿಲ್ಲಾ, ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 Oct 2025 7:51 PM IST
share
ಕಲಬುರಗಿ | ಜಿಲ್ಲಾ, ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

ಕಲಬುರಗಿ : 2025-26ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಕಲಬುರಗಿ ಜಿಲ್ಲೆಯ ರೈತ ಮಹನೀಯರುಗಳಿಂದ ನಾಮನಿರ್ದೇಶನ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಸಮದ್ ಪಟೇಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಪ್ರಗತಿಪರ ರೈತರ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸಲು ಸರ್ಕಾರ ತೀರ್ಮಾನಿಸಿದೆ. ಕೃಷಿ ವಲಯದಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ/ ವಿಶಿಷ್ಟ ಸಾಧನೆ ಮೂಲಕ ರೈತರ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಪರಿಣಿತ ಕೃಷಿಕ ರೈತ ಮಹನಿಯರನ್ನು ಗುರುತಿಸಿ ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲ್ಲೂಕ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಗುತ್ತದೆ.

ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲಿಚ್ಛಿಸುವ ರೈತ ಮಹನೀಯರು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ/ವಿಶಿಷ್ಟ ಸಾಧನೆಯನ್ನು ಮಾಡಿರಬೇಕು. ಅವರ ಸಂಶೋಧನೆಗಳು/ ಸಾಧನೆಗಳು ವ್ಯಾಪಕವಾಗಿ ಅಳವಡಿಸಲು ಕೃಷಿ ಕ್ಷೇತ್ರದ ಏಳಿಗೆಗೆ ಪೂರಕವಾಗಿರಬೇಕು. ಅಭ್ಯರ್ಥಿಗಳು ಮಾಡಿರುವ ಸಾಧನೆಯ ಮೂಲ ಸ್ವರೂಪವಾಗಿದ್ದು, ಬೇರೆಯವರು ಮಾಡಿರುವ ಸಾಧನೆಗಿಂತ ಭಿನ್ನವಾಗಿರಬೇಕು. ರಾಜ್ಯ/ ಕೇಂದ್ರ ಸರಕಾರಗಳ ವಿವಿಧ ಇಲಾಖೆ ಮತ್ತು ಅಂಗಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ/ ನಿರ್ವಹಿಸುತ್ತಿರುವ ಅಭ್ಯರ್ಥಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈಗಾಗಲೇ ರಾಜ್ಯಮಟ್ಟ, ಜಿಲ್ಲಾ ಮಟ್ಟ ಮತ್ತು ತಾಲ್ಲೂಕು ಮಟ್ಟದಲ್ಲಿ ಯಾವುದೇ ಪ್ರಶಸ್ತಿ ಪಡೆದಲ್ಲಿ ಅಂತಹ ರೈತರು ಅರ್ಹರಿರುವುದಿಲ್ಲ.

ಪ್ರಶಸ್ತಿಗೆ ಆಯ್ಕೆಯಾಗುವ ರೈತ ಮಹನೀಯರು ತಮ್ಮ ನಾಮನಿರ್ದೇಶನಗಳ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2025ರ ನ.10 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ತಾಲೂಕಾ ತಾಂತ್ರಿಕ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಯೋಜನಾ ನಿರ್ದೇಶಕರು (ಆತ್ಮ), ಕಲಬುರಗಿ ಹಾಗೂ ತಾಲೂಕ ತಾಂತ್ರಿಕ ವ್ಯವಸ್ಥಾಪಕರನ್ನು, ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ನಿಖೀಲ್ ಆರ್. ಕಟ್ಟೋಳ್ಳಿ-8123679990, ಆಳಂದ-ಸಂಜಯಕುಮಾರ 9481880805, ಆಫಜಲಪೂರ-ಅನೀತಾ 8095094038, ಜೇವರ್ಗಿ ಮತ್ತು ಯಡ್ರಾಮಿ-ಬಸವರಾಜ 6362441982, ಕಲಬುರಗಿ ಮತ್ತು ಕಮಲಾಪೂರ-ಶಿವರಾಯ 9900383618, ಸೇಡಂ-ಬಾಲರಾಜ 9035802555, ಚಿತ್ತಾಪೂರ, ಕಾಳಗಿ ಮತ್ತು ಶಾಹಬಾದ-ಸಚೀನ ಕುಮಾರ 8884444371 ಹಾಗೂ ಚಿಂಚೋಳ್ಳಿ -ವೀರೇಶ ಜೈನ್ 8550866178 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X