Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಲೆಕ್ಕಪರಿಶೋಧಕರನ್ನು...

ಕಲಬುರಗಿ | ಲೆಕ್ಕಪರಿಶೋಧಕರನ್ನು ನೇಮಿಸಿಕೊಂಡು ಸಭೆಯ ನಡುವಳಿ ಪ್ರತಿ ಸಲ್ಲಿಕೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Feb 2026 9:59 PM IST
share

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳು 2025–26ನೇ ಸಾಲಿನ ಲೆಕ್ಕಪರಿಶೋಧನೆಗಾಗಿ, 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕ ಸುಭಾಶ್‌ಚಂದ್ರ ಎಸ್. ಬರ್ಮಾ ಅವರು ತಿಳಿಸಿದ್ದಾರೆ.

ನೇಮಕಗೊಂಡ ಲೆಕ್ಕಪರಿಶೋಧಕರ ಕುರಿತು ನಡೆದ ಸಾಮಾನ್ಯ ಸಭೆಯ ನಡವಳಿ ಪ್ರತಿಯನ್ನು ಸಭೆ ನಡೆದ ದಿನದಿಂದ 7 ದಿನಗಳೊಳಗಾಗಿ, ಕಲಬುರಗಿ ಮಿನಿ ವಿಧಾನಸೌಧ, ಮೂರನೇ ಮಹಡಿ, ಕೊಠಡಿ ಸಂಖ್ಯೆ 25(ಬಿ) ಯಲ್ಲಿರುವ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಪ್ರತಿ ಸಹಕಾರ ಸಂಘವು ತನ್ನ ಲೆಕ್ಕಪತ್ರಗಳನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರು ಅನುಮೋದಿಸಿದ ಅರ್ಹ ಲೆಕ್ಕಪರಿಶೋಧಕರ ಪಟ್ಟಿಯಿಂದ (ಇಲಾಖಾ ಲೆಕ್ಕಪರಿಶೋಧಕರು ಅಥವಾ ಸನ್ನದು ಲೆಕ್ಕಿಗರು) ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಿದ ಲೆಕ್ಕಪರಿಶೋಧಕರ ಮೂಲಕ ಸೆಪ್ಟೆಂಬರ್ 1ರೊಳಗಾಗಿ ಲೆಕ್ಕಪರಿಶೋಧನೆ ಪೂರ್ಣಗೊಳಿಸಬೇಕು. ನಂತರ ಲೆಕ್ಕಪರಿಶೋಧನಾ ವರದಿಯನ್ನು ಸಾಮಾನ್ಯ ಸಭೆಯಲ್ಲಿ ಮಂಡಿಸುವುದು ಕಡ್ಡಾಯವಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸಹಕಾರ ಕಾಯ್ದೆ ಕಲಂ 109(18) ರಂತೆ ಸಂಘದ ಆಡಳಿತ ಮಂಡಳಿಯ ಪ್ರತಿಯೊಬ್ಬ ಸದಸ್ಯ ಹಾಗೂ ಮುಖ್ಯ ಕಾರ್ಯನಿರ್ವಾಹಕರು ಕಾರಾವಾಸ, ದಂಡ ಅಥವಾ ಇವೆರಡಕ್ಕೂ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಲೆಕ್ಕಪರಿಶೋಧಕರ ಆಯ್ಕೆಗಾಗಿ https://sahakaradarpana.karnataka.gov.in ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಹ ಲೆಕ್ಕಪರಿಶೋಧಕರ ಪಟ್ಟಿಯನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 25(ಬಿ) ಯಲ್ಲಿರುವ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಅವರು ಮನವಿ ಮಾಡಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X