ಕಲಬುರಗಿ | ಕುರಿ, ಮೇಕೆ ಸಾಕಾಣಿಕೆ ತರಬೇತಿಗಾಗಿ ರೈತರಿಂದ ಹೆಸರು ನೋಂದಣಿಗೆ ಸೂಚನೆ

ಸಾಂದರ್ಭಿಕ ಚಿತ್ರ PC | GROK
ಕಲಬುರಗಿ : 2025-26ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ “ಕುರಿ ಮತ್ತು ಮೇಕೆ ಸಾಕಾಣಿಕೆ ಲಾಭದಾಯಕ ಉದ್ಯಮಕ್ಕೆ ದಾರಿ” ಕುರಿತು ಇದೇ ಅಕ್ಟೋಬರ್ 14 ರಿಂದ 16 ರವರೆಗೆ ಮೂರು ದಿನಗಳ ಕಾಲ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿದ ಪರಿಶಿಷ್ಠ ಪಂಗಡದ ರೈತರು ಸಹಾಯಕ ಕೃಷಿ ನಿರ್ದೇಶಕ (ರೈ.ಮ)ರಾದ ನೀಲಕ್ಕಾ. ನರಸಲಗಿ-9845350226, ಕೃಷಿ ಅಧಿಕಾರಿ ಪ್ರಿಯಾಂಕ-8277935625 ಇವರನ್ನು ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ಕೊಡಲಾಗುವುದು, ತರಬೇತಿಯು 50 ಜನ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಸೀಮಿತವಾಗಿದೆ. ಎಫ್.ಐ.ಡಿ. ಹೊಂದಿರುವ ಆಸಕ್ತ ಪರಿಶಿಷ್ಠ ಪಂಗಡದ ರೈತರು ನೊಂದಾಯಿಸಿಕೊಳ್ಳಬೇಕು. ಎಫ್.ಐ.ಡಿ. ಆಧಾರ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ತರಬೇಕು ಎಂದು ಅವರು ತಿಳಿಸಿದ್ದಾರೆ.





