Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕುಖ್ಯಾತ ಮನೆಗಳ್ಳನ ಬಂಧನ:...

Kalaburagi | ಕುಖ್ಯಾತ ಮನೆಗಳ್ಳನ ಬಂಧನ: 13.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಶ

ವಾರ್ತಾಭಾರತಿವಾರ್ತಾಭಾರತಿ25 Aug 2026 7:37 PM IST
share
Kalaburagi | ಕುಖ್ಯಾತ ಮನೆಗಳ್ಳನ ಬಂಧನ: 13.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಶ

ಕಲಬುರಗಿ: ಸ್ಟೇಷನ್ ಬಜಾರ್ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿದ್ದು, ಆತನಿಂದ ನಾಲ್ಕು ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 13.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಬಂಧಿತನನ್ನು ತೆಲಂಗಾಣದ ಹೈದರಾಬಾದ್‌ನ ನಾಮಪಲ್ಲಿಯ ಹಜ್ ಹೌಸ್ ಸಮೀಪದ ನಿವಾಸಿ ಮಹ್ಮದ್ ಮುಜಾಹಿದ್ ಅಲಿಯಾಸ್ ಜಾವೀದ್ (32) ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ಮನೆಗೆ ಬೀಗ ಹಾಕಿ ತೆರಳಿದ್ದಾಗ ಕಳ್ಳತನ :

ಜೀವನ ಪ್ರಕಾಶ ಶಾಲೆಯ ಹಿಂಭಾಗದ ಹಳೆ ಜೇವರ್ಗಿ ರಸ್ತೆಯ ನಿವಾಸಿ ಶಿವರಾಜ ಅವಂಟಿ ಅವರು ಕುಟುಂಬ ಸಮೇತ ಬಾಗಲಕೋಟೆಗೆ ತೆರಳಿದ್ದರು. ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದ ಅವರು, ಜನವರಿ 21ರಂದು ಮಧ್ಯಾಹ್ನ ವಾಪಸ್ ಬಂದಾಗ ಮನೆಯ ಬಾಗಿಲಿನ ಕೀಲಿ ಮುರಿದಿರುವುದು ಕಂಡುಬಂದಿತ್ತು.

ಮನೆಯಲ್ಲಿದ್ದ 5 ಗ್ರಾಂ ಚಿನ್ನದ ಉಂಗುರ, ತಲಾ 3 ಗ್ರಾಂ ತೂಕದ ಎರಡು ಸುತ್ತುಂಗುರಗಳು ಹಾಗೂ 16 ಸಾವಿರ ರೂ. ನಗದು ಕಳ್ಳತನವಾಗಿತ್ತು. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತಂಡವು ಖಚಿತ ಮಾಹಿತಿ ಆಧರಿಸಿ ಮಹ್ಮದ್ ಮುಜಾಹಿದ್ ಅಲಿಯಾಸ್ ಜಾವೀದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸ್ಟೇಷನ್ ಬಜಾರ್ ಠಾಣೆಯ ಎರಡು ಹಳೆಯ ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಬಂಧಿತನಿಂದ ಸ್ಟೇಷನ್ ಬಜಾರ್ ಠಾಣೆಯ ಗುನ್ನೆ ನಂ. 171/2025, 175/2025 ಹಾಗೂ 12/2026 ಮತ್ತು ಚೌಕ್ ಪೊಲೀಸ್ ಠಾಣೆಯ ಗುನ್ನೆ ನಂ. 110/2026ಕ್ಕೆ ಸಂಬಂಧಿಸಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟು 85 ಗ್ರಾಂ ಚಿನ್ನಾಭರಣ ಹಾಗೂ 260 ಗ್ರಾಂ ಬೆಳ್ಳಿ ಆಭರಣ, 13.40 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಶಾಲೂ ಹಾಗೂ ಸ್ಟೇಷನ್ ಬಜಾರ್ ಠಾಣೆಯ ಪಿಐ ಜಿ.ಎಂ.ಪಾಟೀಲ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X