Kalaburagi | ಮೇ 24ರಂದು ಬುದ್ಧ- ಬಸವ -ಡಾ. ಅಂಬೇಡ್ಕರ್ ಜಯಂತ್ಯೋತ್ಸವ : ಡಿ.ಜಿ ಸಾಗರ್

ಕಲಬುರಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮೇ 24ರಂದು ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಬುದ್ಧ- ಬಸವ -ಡಾ.ಅಂಬೇಡ್ಕರ್ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ್ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಬುದ್ಧ ಬಸವ ಡಾ.ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ ಹಾಗೂ ಸಂಜೆ 6:30 ಗಂಟೆಗೆ ಅಲ್ಲಿನ ಸಂತೆ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಬೈಲೂರು ಹಾಗೂ ತೋಟದ ಮಠದ ನಿಜಗುಣಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರು ಆಗಿರುವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನರೋಣಾ ಗ್ರಾಮದ ಮಹಾಂತೇಶ್ವರ ಮಠದ ಗುರು ಮಹಾಂತ ಮಹಾಸ್ವಾಮಿಗಳು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆಳಂದ ಶಾಸಕ ಬಿ.ಆರ್.ಪಾಟೀಲ್, ಶಾಸಕರಾದ ಬಸವರಾಜ್ ಮತ್ತಿಮಡು, ಅಲ್ಲಮಪ್ರಭು ಪಾಟೀಲ್, ಸುಭಾಷ್ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ, ರೇವು ನಾಯಕ್ ಬೆಳಮಗಿ, ವಿಜಯಕುಮಾರ್ ರಾಮಕೃಷ್ಣ, ಡಾ.ಅಪ್ಪಗೆರೆ ಸೋಮಶೇಖರ್, ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆ ಜಿಲ್ಲಾ ಮುಖಂಡ ಸುರೇಶ್ ಹಾದಿಮನಿ, ಬಿ.ಸಿ ವಾಲಿ, ಉಮೇಶ್ ನರೋಣ, ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ಶಿವಪುತ್ರ ರಾಗಿ, ನಾಗಪ್ಪ ಕೋರೆ ಮತ್ತಿತರರು ಉಪಸ್ಥಿತರಿದ್ದರು.






