ಕಲಬುರಗಿ | ನ.26ರಂದು ಗುಲ್ಬರ್ಗಾ ವಿವಿಯಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ ಬೆಂಗಳೂರು ಇವರ ಸಹಯೋಗದೊಂದಿಗೆ 76ನೇ ಸಂವಿಧಾನ ದಿನಾಚರಣೆ ನಿಮಿತ್ತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನ.26 ರಂದು ಬೆಳಿಗ್ಗೆ 10.30 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದಲ್ಲಿನ ಮಹಾತ್ಮಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ವಾಯ್.ರತ್ನಮ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ನಿರ್ದೇಶಕ ಡಾ.ಸಬೀರ್ ಅಹ್ಮದ್ ಮುಲ್ಲಾ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಮ್.ಭೈರಪ್ಪ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ.ಎಸ್.ಎನ್.ಗಾಯಕ್‍ವಾಡ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲ್ಬರ್ಗಾ ವಿಶ್ವವಿದ್ಯಾಲಯದ (ಮೌಲ್ಯಮಾಪನ) ಕುಲಸಚಿವರಾದ ಡಾ.ನಿಂಗಣ್ಣ ಕಣ್ಣೂರ ಹಾಗೂ ಹಣಕಾಸು ಅಧಿಕಾರಿ ಜಯಾಂಬಿಕಾ ಅವರು ಗೌರವ ಉಪಸ್ಥಿತಿ ವಹಿಸುವರು.
ಅಂದು ಮಧ್ಯಾಹ್ನ 12.30 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯ, ವಾಣಿಜ್ಯ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಡೀನ್‍ರಾದ ಪ್ರೊ.ರಾಜನಾಳ್ಕರ್ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮುಖ್ಯ ಗೋಷ್ಠಿ ನಡೆಯಲಿದೆ. ಕಲಬುರಗಿಯ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲರಾದ ಡಾ.ಐ.ಎಸ್.ವಿದ್ಯಾಸಾಗರ ಅವರು “ಸಂವಿಧಾನದ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರ” ವಿಷಯ ಕುರಿತು ಹಾಗೂ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವರಾಜ ಅವರು “ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆಯಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯಾಗಿ ಭಾರತದ ಸಂವಿಧಾನ” ವಿಷಯ ಕುರಿತು ಪ್ರಬಂಧಕಾರರಾಗಿ ಮಾತನಾಡುವರು.
ಮುಕ್ತಾಯ ಸಮಾರಂಭ :
ಅಂದು ಮಧ್ಯಾಹ್ನ 3 ಗಂಟೆಗೆ ಈ ರಾಷ್ಟ್ರೀಯ ವಿಚಾರ ಸಂಕಿರಣದ ಮುಕ್ತಾಯ ಸಮಾರಂಭ ಜರುಗಲಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ, ಭೂಗೋಳಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರು, ಡೀನರಾದ ಪ್ರೊ. ಅರವಿಂದ ಮೂಲಿಮನಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್.ಉಡಿಕೇರಿ, ಧಾರವಾಡ ಸಮಾಜ ಚಿಂತಕ ಡಾ.ಬಸವರಾಜ ಗೋರವಾರ, ಗುಲ್ಬರ್ಗಾ ವಿಶ್ವವಿದ್ಯಾಲಯದ (ಮೌಲ್ಯಮಾಪನ) ಕುಲಸಚಿ ಡಾ.ನಿಂಗಣ್ಣ ಕಣ್ಣೂರ ಹಾಗೂ ಹಣಕಾಸು ಅಧಿಕಾರಿ ಜಯಾಂಬಿಕಾ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.







