Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಬ್ಬು ಖರೀದಿ ದರ ನಿಗದಿಗೆ...

Kalaburagi | ಕಬ್ಬು ಖರೀದಿ ದರ ನಿಗದಿಗೆ ವಾರದ ಗಡುವು : ಡಿಸಿ ಇಕ್ರಮ್ ಶರೀಫ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Oct 2026 7:51 PM IST
share
Kalaburagi | ಕಬ್ಬು ಖರೀದಿ ದರ ನಿಗದಿಗೆ ವಾರದ ಗಡುವು : ಡಿಸಿ ಇಕ್ರಮ್ ಶರೀಫ್ ಸೂಚನೆ

ಕಲಬುರಗಿ: ಪ್ರಸಕ್ತ 2026–27ನೇ ಸಾಲಿನ ಕಬ್ಬು ಕಟಾವು ಆರಂಭಿಸುವ ಮುನ್ನ ಪ್ರತಿ ಟನ್ ಕಬ್ಬಿನ ಖರೀದಿ ದರ, ಸಾಗಣೆ ವೆಚ್ಚ ಸೇರಿದಂತೆ ರೈತರಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಒಂದು ವಾರದೊಳಗೆ ಸೂಕ್ತ ನಿರ್ಧಾರ ಕೈಗೊಂಡು ಕಟಾವು ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಬ್ಬು ಬೆಳೆಗಾರರು, ರೈತ ಸಂಘದ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಐದು ಸಕ್ಕರೆ ಕಾರ್ಖಾನೆಗಳು ಪರಸ್ಪರ ಸಮಾಲೋಚನೆ ನಡೆಸಿ ರೈತರಿಗೆ ನ್ಯಾಯಯುತ ದರ ನೀಡುವ ಕುರಿತು ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸಕ್ಕರೆ ಹಾಗೂ ಎಥನಾಲ್ ಬೆಲೆ ಹೆಚ್ಚಳದಿಂದ ಕಾರ್ಖಾನೆಗಳಿಗೆ ಲಾಭವಾಗುತ್ತಿದ್ದು, ಅದರ ಪಾಲು ರೈತರಿಗೂ ದೊರೆಯಬೇಕು. ಕಬ್ಬು ಕಟಾವಿನಲ್ಲಿ ತಾರತಮ್ಯ, ತೂಕದಲ್ಲಿ ಮೋಸ, ಹಣ ಪಾವತಿಯಲ್ಲಿ ವಿಳಂಬ ಹಾಗೂ ಹಳೆಯ ಬಾಕಿ ಉಳಿಸಿಕೊಳ್ಳುವ ಸಮಸ್ಯೆಗಳನ್ನು ಪರಿಹರಿಸಬೇಕು. ಕಟಾವು, ತೂಕ ಮತ್ತು ಹಣ ಪಾವತಿಯ ಪ್ರತಿಯೊಂದು ಹಂತದ ಮಾಹಿತಿಯನ್ನು ರೈತರಿಗೆ ಎಸ್‌ಎಂಎಸ್ ಮೂಲಕ ತಿಳಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಕಬ್ಬು ಸಾಗಿಸಿಕೊಂಡು ಕಾರ್ಖಾನೆಗಳಿಗೆ ಬರುವ ರೈತರಿಗೆ ರಾತ್ರಿ ತಂಗಲು ಶೆಡ್, ಕುಡಿಯುವ ನೀರು ಹಾಗೂ ಶೌಚಾಲಯದಂತಹ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ರೈತರಿಗೆ ಗೌರವಯುತ ಸೌಲಭ್ಯ ಕಲ್ಪಿಸದಿರುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ರೇಣುಕಾ ಶುಗರ್ಸ್ ಕಾರ್ಖಾನೆಯಿಂದ ಹೊರಬರುವ ಬೂದಿಯಿಂದ ಸುತ್ತಮುತ್ತಲಿನ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ರೈತ ಮುಖಂಡರು ದೂರಿದ ಹಿನ್ನೆಲೆಯಲ್ಲಿ, ಕಾರ್ಖಾನೆಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಪರಿಸರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಸರ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸುವಂತೆಯೂ ಸೂಚಿಸಿದರು.

ಈ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಪ್ರತಿ ಟನ್ ಕಬ್ಬಿಗೆ 5,500 ರೂ. ದರ ನಿಗದಿಪಡಿಸಬೇಕು, ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು, ಎಲ್ಲ ಕಾರ್ಖಾನೆಗಳು ಎಫ್‌ಆರ್‌ಪಿಗಿಂತ ಹೆಚ್ಚಿನ ಏಕರೂಪದ ದರ ನೀಡಬೇಕು, ಕಟಾವಿನಲ್ಲಿ ತಾರತಮ್ಯ ಮಾಡಬಾರದು, ಟೋಲ್ ಶುಲ್ಕದಿಂದ ವಿನಾಯಿತಿ ನೀಡಬೇಕು ಹಾಗೂ ಕಾರ್ಖಾನೆಗಳ ಗೇಟ್ ಬಳಿ ಕಬ್ಬಿನ ತೂಕ ಮಾಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು. ಅಲ್ಲದೆ, ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ 500 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಬೇಕು ಮತ್ತು ವಿದ್ಯುತ್ ಅವಘಡದಿಂದ ಕಬ್ಬು ಸುಟ್ಟ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಖಾನೆವಾರು ಎಫ್‌ಆರ್‌ಪಿ ದರ ಪ್ರಕಟ :

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮಾರುತಿ ಬ್ಯಾಕೋಡ್ ಮಾಹಿತಿ ನೀಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 40,124 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ ಎಂದರು.

ಇದೇ ವೇಳೆ ಕಾರ್ಖಾನೆವಾರು ಕಬ್ಬಿನ ಎಫ್‌ಆರ್‌ಪಿ ದರಗಳನ್ನು ಪ್ರಕಟಿಸಿದರು. ಕೆಪಿಆರ್ ಶುಗರ್ಸ್ ಆ್ಯಂಡ್ ಅಪಾರಲ್ಸ್ ಲಿಮಿಟೆಡ್‌ಗೆ ಪ್ರತಿ ಟನ್‌ಗೆ 3,846 ರೂ., ಎನ್‌ಎಸ್‌ಎಲ್ ಶುಗರ್ಸ್‌ಗೆ 3,703 ರೂ., ಶ್ರೀ ರೇಣುಕಾ ಶುಗರ್ಸ್‌ಗೆ 3,760 ರೂ., ದಿ ಉಗಾರ್ ಶುಗರ್ ವರ್ಕ್ಸ್ ಲಿಮಿಟೆಡ್‌ಗೆ 3,803 ರೂ. ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತಕ್ಕೆ 3,419 ರೂ. ದರ ನಿಗದಿಯಾಗಿದೆ ಎಂದು ತಿಳಿಸಿದರು.

ಕಳೆದ ವರ್ಷದಂತೆ ಈ ವರ್ಷವೂ ರೈತರು ಹಾಗೂ ಕಾರ್ಖಾನೆಗಳ ನಡುವೆ ಚರ್ಚೆ ನಡೆಸಿ ನ್ಯಾಯಯುತ ದರ ನಿಗದಿಪಡಿಸಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ರೈತ ಮುಖಂಡರಾದ ರಮೇಶ ಹೂಗಾರ, ಶರಣಬಸಪ್ಪ ಮಮಶೆಟ್ಟಿ, ಧರ್ಮರಾಜ ಸಾಹು, ಶ್ರೀಮಂತ ಬಿರಾದಾರ, ರಮೇಶ ಪಾಟೀಲ, ಕರೆಪ್ಪ ಕರಗೊಂಡ ಸೇರಿದಂತೆ ಹಲವರು ರೈತರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಸಹಾಯಕ ಆಯುಕ್ತೆ ರಿತಿಕಾ ವರ್ಮಾ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಚಿಂಚೋಳಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ್, ಯಡ್ರಾಮಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಆಳಂದ ತಹಶೀಲ್ದಾರ್ ಅಣ್ಣಾರಾವ ಪಾಟೀಲ ಹಾಗೂ ಕೆಪಿಆರ್ ಶುಗರ್ಸ್ ಆ್ಯಂಡ್ ಅಪಾರಲ್ಸ್ ಲಿಮಿಟೆಡ್, ಎನ್‌ಎಸ್‌ಎಲ್ ಶುಗರ್ಸ್, ಶ್ರೀ ರೇಣುಕಾ ಶುಗರ್ಸ್, ದಿ ಉಗಾರ್ ಶುಗರ್ ವರ್ಕ್ಸ್ ಲಿಮಿಟೆಡ್ ಮತ್ತು ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದ ಪ್ರತಿನಿಧಿಗಳು ಸೇರಿದಂತೆ ಅನೇಕ ರೈತ ಮುಖಂಡರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X