Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರ್ಕಾರಿ ಶಾಲೆಗಳ...

Kalaburagi | ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ: ಆಜಾದಪುರದಲ್ಲಿ ಶಾಲೆ ವಿದ್ಯಾರ್ಥಿಗಳೊಂದಿಗೆ ಎಸ್‌ಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Nov 2026 2:11 PM IST
share
Kalaburagi | ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ: ಆಜಾದಪುರದಲ್ಲಿ ಶಾಲೆ ವಿದ್ಯಾರ್ಥಿಗಳೊಂದಿಗೆ ಎಸ್‌ಎಫ್‌ಐ ಪ್ರತಿಭಟನೆ

ಕಲಬುರಗಿ: ರಾಜ್ಯದ 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಆಜಾದಪುರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಸರ್ಕಾರದ ಕ್ರಮವು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗಿಯವರ ಕೈಗೆ ಒಪ್ಪಿಸುವ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಡಿ ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವುದಾಗಿ ಮುಖ್ಯಮಂತ್ರಿ ಘೋಷಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 2015-16ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 47.1 ಲಕ್ಷ ವಿದ್ಯಾರ್ಥಿಗಳಿದ್ದರೆ, 2025-26ನೇ ಸಾಲಿನಲ್ಲಿ ಈ ಸಂಖ್ಯೆ 38.2 ಲಕ್ಷಕ್ಕೆ ಇಳಿದಿದೆ. ಅಂದರೆ, ಸುಮಾರು ಶೇ.19ರಷ್ಟು ದಾಖಲಾತಿ ಕುಸಿತವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ, ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿರುವುದು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದಿರುವುದೇ ದಾಖಲಾತಿ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ. ಆದರೆ, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಶಾಲೆಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ ಎಂದು ದೂರಿದರು.

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ. 43,553 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದರೂ ಶಿಕ್ಷಕರ ಕೊರತೆ ನೀಗಿಲ್ಲ. ಮುಂದಿನ ಶೈಕ್ಷಣಿಕ ವರ್ಷದೊಳಗೆ 18 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಆದರೆ, ಈ ಭರವಸೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ. ಇದರಿಂದ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು.

ಕೆಪಿಎಸ್ ಯೋಜನೆಯಡಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 2,500 ಕೋಟಿ ರೂ. ಸಾಲ ಪಡೆಯುವುದು, ಸಿಎಸ್‌ಆರ್ ನಿಧಿಯಡಿ 500 ಹೊಸ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದು ಹಾಗೂ ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ಸ್ಥಾಪಿಸುವುದಾಗಿ ತಿಳಿಸಿತ್ತು. ಆದರೆ, ಹೊಸ ಶಾಲೆಗಳನ್ನು ಆರಂಭಿಸುವ ಬದಲು ಈಗಿರುವ ಸರ್ಕಾರಿ ಶಾಲೆಗಳನ್ನು ಪಂಚಾಯಿತಿಗೊಂದು ಶಾಲೆಯನ್ನಾಗಿ ಉನ್ನತೀಕರಿಸುವ ಹೆಸರಿನಲ್ಲಿ ವಿಲೀನಗೊಳಿಸಲು ಮುಂದಾಗಿರುವುದು ಗ್ರಾಮೀಣ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು.

ಸಂವಿಧಾನದ ಅನುಚ್ಛೇದ 21ಎ ಹಾಗೂ ಶಿಕ್ಷಣ ಹಕ್ಕು ಕಾಯ್ದೆ-2009ರ ಪ್ರಕಾರ 6ರಿಂದ 14 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಹೀಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಬದಲು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಎಸ್‌ಎಫ್‌ಐ ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ಅಧ್ಯಕ್ಷೆ ಸುಜಾತ ವೈ., ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಮ್ಯಾಗಡಿ, ಮಂಜುನಾಥ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

protestSFIgovernment schoolsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X