Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರ್ಕಾರದ ಸೌಲಭ್ಯಗಳು...

Kalaburagi | ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಬಡವರಿಗೂ ತಲುಪಿಸುವುದು ನಮ್ಮ ಗುರಿ: ರಾಮಪ್ಪ ಎಂ.

ವಾರ್ತಾಭಾರತಿವಾರ್ತಾಭಾರತಿ24 Jun 2026 8:56 PM IST
share
Kalaburagi | ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಬಡವರಿಗೂ ತಲುಪಿಸುವುದು ನಮ್ಮ ಗುರಿ: ರಾಮಪ್ಪ ಎಂ.

ಕಲಬುರಗಿ: ಸಮಾಜದ ಕಟ್ಟಕಡೆಯ ಬಡವರಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಡೆದ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಿಗಮದ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು 30 ದಿನಗಳೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಸೌಲಭ್ಯ ಪಡೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿ ನಿಗಮಕ್ಕೆ 75 ಕೋಟಿ ರೂ. ಬಜೆಟ್ ನಿಗದಿಯಾಗಿದ್ದು, ವಿಕಾಸ ಯೋಜನೆ (ವಿಡಿಪಿ) ಸೇರಿದಂತೆ ಒಟ್ಟು ಅನುದಾನ ಸುಮಾರು 100 ಕೋಟಿ ರೂ. ತಲುಪುವ ನಿರೀಕ್ಷೆಯಿದೆ ಎಂದು ಹೇಳಿದರು.

13 ಗ್ಯಾರಂಟಿಗಳಿಂದ ಸಮುದಾಯಕ್ಕೆ ಲಾಭ :

ನಿಗಮದ 8 ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ 5 ಪಂಚ ಗ್ಯಾರಂಟಿ ಯೋಜನೆಗಳು ಸೇರಿ ಒಟ್ಟು 13 ಸೌಲಭ್ಯಗಳು ಸಮುದಾಯಕ್ಕೆ ದೊರೆಯುತ್ತಿವೆ. ನಿಗಮವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಹಲವು ಯೋಜನೆಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಭೋವಿ ಹಾಗೂ ವಡ್ಡರ ಸಮುದಾಯಗಳು ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಗಮನಿಸಿ, ಈ ಭಾಗಕ್ಕೆ ಹೆಚ್ಚಿನ ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಮಟ್ಟದಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, 30 ದಿನಗಳೊಳಗೆ ಶಾಸಕರ ಆಯ್ಕೆ ಪಟ್ಟಿಯನ್ನು ನಿಗಮದ ಮುಖ್ಯ ಕಚೇರಿಗೆ ಸಲ್ಲಿಸಬೇಕು ಹಾಗೂ ಬಾಕಿ ಅರ್ಜಿಗಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಶಿಕ್ಷಣ ಮತ್ತು ಸಬಲೀಕರಣಕ್ಕೆ ಒತ್ತು :

ಬಡತನ ನಿವಾರಣೆಗೆ ಶಿಕ್ಷಣವೇ ಪ್ರಮುಖ ಮಾರ್ಗವಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಾಸ್ಟೆಲ್ ಸೌಲಭ್ಯಗಳ ವಿಸ್ತರಣೆ, ಮಹಿಳಾ ಸಂಘಗಳ ಸಬಲೀಕರಣ ಹಾಗೂ ಅಲೆಮಾರಿ ಸಮುದಾಯಗಳ ಗುರುತಿಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ನಕಲಿ ಜಾತಿ ಪ್ರಮಾಣಪತ್ರಕ್ಕೆ ಕಡಿವಾಣ :

ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಅನರ್ಹರು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಜಾತಿ ಪ್ರಮಾಣಪತ್ರ ನೀಡುವ ಮೊದಲು ಶಾಲಾ ದಾಖಲಾತಿಗಳ ಸಮಗ್ರ ಪರಿಶೀಲನೆ ಕಡ್ಡಾಯಗೊಳಿಸಲಾಗುವುದು ಎಂದು ರಾಮಪ್ಪ ಎಂ. ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ನಿಗಮದ ವ್ಯವಸ್ಥಾಪಕ ಮರಲಿಂಗ್ ಹೊನ್ನೆಗುಂಟಿಕರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X