ಕಲಬುರಗಿ | ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳ ಸಾವು

ಕಲಬುರಗಿ : ಕಬ್ಬು ತುಂಬಿದ ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಹಡಗಿಲ ಹಾರುತಿ ಕ್ರಾಸ್ ಬಳಿ ನಡೆದಿದೆ.
ಹಡಗಿಲ ಹಾರುತಿ ಗ್ರಾಮದ ಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.
ಕಲಬುರಗಿಯಿಂದ ಅಫಜಲಪುರ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೋಗುತ್ತಿದ್ದ ಕುರಿಗಳ ಮೇಲೆ ಹರಿದ ಪರಿಣಾಮ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.
ಕಲಬುರಗಿ ಸಂಚಾರಿ -1 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





