Kalaburagi | ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಫಜಲಪುರ : ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಹಾಗೂ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲಾ ಆಡಳಿತ ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿತು. ನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಎಲ್ಲಾ ವಿದ್ಯಾರ್ಥಿಗಳನ್ನು ಅಫಜಲಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಅಸ್ವಸ್ಥತೆಗೆ ನಿಖರ ಕಾರಣ ಏನು ಎಂಬುದರ ಕುರಿತು ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Next Story




