ಕಲಬುರಗಿ | ಪೆಟ್ರೋಲ್ ಬಂಕ್ ಕೆಲಸಗಾರನ ಮೇಲೆ ಚಾಕುವಿನಿಂದ ಹಲ್ಲೆ; ಗಾಯ

ಕಲಬುರಗಿ: ಪೆಟ್ರೋಲ್ ಹಾಕುವ ವಿಚಾರಕ್ಕೆ ಸಂಬಂಧಿಸಿದ ಜಗಳದಲ್ಲಿ ಬಂಕ್ ಕೆಲಸಗಾರನ ಮೇಲೆ ಕಿಡಿಗೇಡಿಗಳು ಚಾಕುವಿನಿಂದ ದಾಳಿ ನಡೆಸಿದ ಘಟನೆ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.
ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ತ್ರೀಶೂಲ್ ಎಂಬ ಯುವಕನ ಮೇಲೆ ಸುಮಾರು ಆರರಿಂದ ಏಳು ಮಂದಿ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಸಂಪೂರ್ಣ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಕುರಿತು ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
Next Story





