Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಔಷಧಗಳ ಸುರಕ್ಷಿತ...

Kalaburagi | ಔಷಧಗಳ ಸುರಕ್ಷಿತ ಬಳಕೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಮಹತ್ವದ್ದು: ಡಾ.ಶರಣಬಸಪ್ಪ ಕ್ಯಾತನಾಳ

ವಿಶ್ವ ಫಾರ್ಮಸಿಸ್ಟ್ ದಿನಾಚರಣೆ-2026 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Oct 2026 7:50 PM IST
share
Kalaburagi | ಔಷಧಗಳ ಸುರಕ್ಷಿತ ಬಳಕೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಮಹತ್ವದ್ದು: ಡಾ.ಶರಣಬಸಪ್ಪ ಕ್ಯಾತನಾಳ

ಕಲಬುರಗಿ: ಔಷಧಗಳ ಸುರಕ್ಷಿತ ಬಳಕೆ, ಗುಣಮಟ್ಟದ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಬದಲಾಗುತ್ತಿರುವ ಆರೋಗ್ಯ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಫಾರ್ಮಸಿ ಅಧಿಕಾರಿಗಳ ಜ್ಞಾನ ಹಾಗೂ ಕೌಶಲ್ಯಗಳನ್ನು ನಿರಂತರವಾಗಿ ಬಲಪಡಿಸುವ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ನಗರದ ಟ್ಯಾಂಕ್ ಬಂಡ್ ರಸ್ತೆಯ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ರವಿವಾರ ಆಯೋಜಿಸಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಆರೋಗ್ಯದ ಭವಿಷ್ಯಕ್ಕಾಗಿ ಫಾರ್ಮಸಿ ಅಧಿಕಾರಿಗಳ ಸಬಲೀಕರಣ’ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಫಾರ್ಮಸಿಸ್ಟ್‌ಗಳು ಪ್ರಮುಖ ಪಾತ್ರ ವಹಿಸುತ್ತಾರೆ. ರೋಗಿಗಳಿಗೆ ಸೂಕ್ತ ಔಷಧಗಳ ಕುರಿತು ಮಾಹಿತಿ ನೀಡುವುದು, ಔಷಧಗಳ ಸುರಕ್ಷಿತ ಬಳಕೆಯನ್ನು ಖಚಿತಪಡಿಸುವುದು ಹಾಗೂ ಗುಣಮಟ್ಟದ ಔಷಧ ವಿತರಣೆಯಲ್ಲಿ ಅವರು ವಹಿಸುವ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.

ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಹಾಗೂ ಜಿಮ್ಸ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಕುಮಾರ ಸಿ.ಆರ್., ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ರುಕಿಯಾ ಅಸ್ನಾ ರಾಬಾ, ಸಹಾಯಕ ಔಷಧ ನಿಯಂತ್ರಕ-2 ತೇಜಸ್ವಿ ಹಾಗೂ ಅಖಿಲ ಭಾರತ ಸರ್ಕಾರಿ, ಖಾಸಗಿ ಹಾಗೂ ಸಾರ್ವಜನಿಕ ವಲಯದ ಫಾರ್ಮಸಿ ಅಧಿಕಾರಿಗಳ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ. ಬಿ.ಎಸ್. ದೇಸಾಯಿ ಉಪಸ್ಥಿತರಿದ್ದರು.

ಫಾರ್ಮಸಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪ್ರಾಂಶುಪಾಲ ಡಾ. ಅಶೋಕ ಮಾಲಪಾಣಿ ಉಪನ್ಯಾಸ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಸಂತೋಷಕುಮಾರ ಕುಸುಮಾ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಯ ಅಸಿಸ್ಟಂಟ್ ಡೈರೆಕ್ಟರ್ ಆಫ್ ಫಾರ್ಮಸಿ ನರಸಿಂಹರಾಜ, ಚಿಮ್ಸ್ ಆಸ್ಪತ್ರೆಯ ಡೆಪ್ಯೂಟಿ ಚೀಫ್ ಫಾರ್ಮಸಿ ಆಫೀಸರ್ ಸಾವನಕುಮಾರ, ರಾಜ್ಯ ಪರಿಷತ್ ಸದಸ್ಯ ಬಸವರಾಜ ಸಜ್ಜನ, ಪ್ರಧಾನ ಕಾರ್ಯದರ್ಶಿ ರೇವಣಸಿದ್ದೇಶ್ವರ ಹಿರೇಮಠ, ಕೋಶಾಧ್ಯಕ್ಷ ಮಂಜುನಾಥ ರಾಠೋಡ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

PharmacistsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X