Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಪಘಾತ ಪ್ರಮಾಣವನ್ನು...

ಕಲಬುರಗಿ | ಅಪಘಾತ ಪ್ರಮಾಣವನ್ನು ಶೇ.15ರಷ್ಟು ಇಳಿಸಲು ಮುಂದಾಗಿ : ಪೊಲೀಸ್ ಆಯುಕ್ತ ಶರಣಪ್ಪ ಎಸ್. ಡಿ.

'ರಸ್ತೆ ಸುರಕ್ಷತಾ ನಡಿಗೆ'

ವಾರ್ತಾಭಾರತಿವಾರ್ತಾಭಾರತಿ7 March 2025 11:38 AM IST
share
ಕಲಬುರಗಿ | ಅಪಘಾತ ಪ್ರಮಾಣವನ್ನು ಶೇ.15ರಷ್ಟು ಇಳಿಸಲು ಮುಂದಾಗಿ : ಪೊಲೀಸ್ ಆಯುಕ್ತ ಶರಣಪ್ಪ ಎಸ್. ಡಿ.

ಕಲಬುರಗಿ : ರಸ್ತೆ ಅಫಘಾತಗಳಲ್ಲಿ ಅಮೂಲ್ಯ ಜೀವಗಳು ಬಲಿಯಾಗುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ನಗರದಲ್ಲಿ ಅಪಘಾತ ಪ್ರಮಾಣವನ್ನು ಕನಿಷ್ಠ ಶೇ.15ರಷ್ಟು ಕಡಿಮೆಗೊಳಿಸುವ ಗುರಿಯಿಟ್ಟುಕೊಂಡು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್.ಡಿ. ಹೇಳಿದ್ದಾರೆ.

ಗುರುವಾರ ನಗರದಲ್ಲಿ ಯುನೈಟೆಡ್ ಆಸ್ಪತ್ರೆಯ ಸಹಯೋಗದಲ್ಲಿ ಪೊಲೀಸ್ ಇಲಾಖೆಯು ಆಯೋಜಿಸಿದ್ದ 'ರಸ್ತೆ ಸುರಕ್ಷತಾ ನಡಿಗೆ'ಯ ನಂತರ ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, 2024ರಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಫಘಾತಗಳ ಪ್ರಮಾಣ ಶೇ.5ರಷ್ಟು ಕಡಿಮೆಯಾಗಿದೆ ಎಂದರು.

’ಹಿಂದಿನ ವರ್ಷಕ್ಕೆ ಹೋಲಿಸಿದರೆ 2024ರಲ್ಲಿ ಅಫಘಾತಗಳ ಪ್ರಮಾಣ ಶೇ.5ರಷ್ಟು ಕಡಿಮೆಯಾಗಿದೆ. 2024ಕ್ಕೆ ಹೋಲಿಸಿದರೆ ಈ ವರ್ಷ ಅಫಘಾತಗಳ ಪ್ರಮಾಣವನ್ನು ಶೇ.15ರಷ್ಟು ಕಡಿಮೆ ಮಾಡುವ ಗುರಿಯಿಟ್ಟುಕೊಂಡಿದ್ದೇವೆ. ಇದು ಕೇವಲ ಪೊಲೀಸರಿಂದ ಮಾತ್ರವೇ ಆಗುವ ಕೆಲಸವಲ್ಲ. ಮುಖ್ಯವಾಗಿ ಸಾರ್ವಜನಿಕರು, ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಮಾತ್ರ ಅದು ಸಾಧ್ಯವಾಗುತ್ತದೆ,” ಎಂದು ಸಾರ್ವಜನಿಕರ ಪಾಲ್ಗೊಳ್ಳುವಿಕೆಯ ಬಗ್ಗೆ ಒತ್ತಿ ಹೇಳಿದರು.

ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಕಮೀಷನರ್ ನಗರದ ಪ್ರಮುಖ ಹಾಟ್ಸ್ಪಾ ಟ್ಗಗಳಲ್ಲಿ ಪೆÇಲೀಸ್ ಕಣ್ಗಾವಲನ್ನು ಹೆಚ್ಚಿಸಿ ವಾಹನ ಚಾಲಕರು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪರಿಪಾಲಿಸುವಂತೆ ಮಾಡಲಾಗುತ್ತಿದೆ ಎಂದರು.

“ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಯಾವ ಮುಲಾಜೂ ಇಲ್ಲದೇ ದಂಡವನ್ನು ವಿಧಿಸುತ್ತಿದ್ದೇವೆ. ಇತ್ತೀಚೆಗೆ ಇ-ಚಲನ್ ವ್ಯವಸ್ಥೆಯನ್ನೂ ಕೂಡ ಜಾರಿಗೊಳಿಸಿದ್ದು ಇದರ ಮೂಲಕವೇ ಕಳೆದ ಎರಡು ತಿಂಗಳಿನಲ್ಲಿ 7000 ಜನರಿಗೆ ದಂಡ ವಿಧಿಸಿದ್ದೇವೆ. ಕಳೆದ ಎರಡು ತಿಂಗಳಿನಲ್ಲಿ ಸುಮಾರು 10,000 ಸಂಚಾರ ನಿಯಮ ಉಲ್ಲಂಘನೆಯಾಗಿದ್ದು ಉಲ್ಲಂಘಿಸಿದ ವಾಹನ ಚಾಲಕರಿಂದ ಸುಮಾರು 55,00,000 ರೂ. ದಂಡ ವಸೂಲಿ ಮಾಡಲಾಗಿದೆ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕರು ವಾಹನ ಚಲಾಯಿಸುವುದನ್ನು ತಡೆಯುವುದಕ್ಕಾಗಿ ವಿಶೇಷ ಅಭಿಯಾನವನ್ನೂ ನಡೆಸಿದ್ದೇವೆ,” ಎಂದು ಅವರು ಹೇಳಿದರು.

ಸಂಚಾರ ನಿಯಮ ಪಾಲನೆ ಮಹತ್ವವನ್ನು ತಿಳಿಸಿ ಹೇಳಿದ ಕಮೀಷನರ್ ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಮೂಲ್ಯ ಜೀವಗಳು ಉಳಿಯುವುದು ಮಾತ್ರವಲ್ಲದೇ ಆ ಜೀವಗಳನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳೂ ನೆಮ್ಮದಿಯಿಂದ ಬದುಕುತ್ತವೆ ಎಂದರು.

ಯುನೈಟೆಡ್ ಆಸ್ಪತ್ರೆಯ ಹಿರಿಯ ನರರೋಗತಜ್ಞ ಡಾ.ವಿನಯ್ ಸಾಗರ್ ಶರ್ಮ ಮಾತನಾಡಿ, ಅಫಘಾತಗಳಲ್ಲಿ ಗಾಯಗೊಂಡು ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಿದ ಅನುಭವದ ಆಧಾರದಲ್ಲಿ ವಾಹನ ಚಾಲಕರಿಗೆ ಸಂಚಾರ ನಿಯಮ ಪಾಲನೆಯ ಕಿವಿಮಾತು ಹೇಳಿದರು.

ಕಳೆದ ಐದು ವರ್ಷಗಳ ಅವಧಿಯಲ್ಲಿ ಯಾವುದೆ ಅಫಘಾತ ಮಾಡದೆ ಬಸ್ ಚಾಲನೆ ಮಾಡಿದ ಜಲಂದರ್ ಸುಲ್ತಾನಪುರ, ರಾಜಶೇಖರ ಕಲಶೆಟ್ಟಿ ಮತ್ತು ಈರಣ್ಣ ಅವರಿಗೆ ಪೊಲೀಸ್ ಕಮೀಷನರ್ ಪದಕ ವಿತರಣೆ ಮಾಡಿ ಗೌರವಿಸಿದರು.

ಅದೇ ರೀತಿಯಲ್ಲಿ ಸಾರ್ವಜನಿಕರ ದೂರುಗಳನ್ನು ನಿಭಾಯಿಸುವಲ್ಲಿ ಪ್ರಮಖ ಪಾತ್ರ ವಹಿಸಿದ ಪೊಲೀಸ್ ಕಾನ್ಸಟೇಬಲ್ ಗಳಾದ ದತ್ತಾತ್ರೆಯ, ಸಂತೋಷ್‌ ಕುಮಾರ್ ಮತ್ತು ಅಕ್ಬರ್ ಪಾಶ ಅವರಿಗೆ, ನಿಸ್ವಾರ್ಥವಾ ಸೇವೆಗೈದ ಪೌರಕಾರ್ಮಿಕರಾದ ಶರಣಪ್ಪ, ಅಂಬರೀಷ್‌, ಮತ್ತು ಮಾಪಣ್ಣ ಅವರಿಗೆ, ಅಂಬುಲೆನ್ಸ್ ಚಾಲಕರಾದ ಮಹೇಶ್ ಸರಡಗಿ, ನಾಗರಾಜ ಮತ್ತು ಪವನ್ ಕುಮಾರ್ ಅವರಿಗೆ, ಅಗ್ನಿಶಾಮಕ ಸಿಬ್ಬಂದಿಯಾದ ಅಂಕುಶ, ಲಕ್ಷ್ಮಣ ಮತ್ತು ರಮೇಶ್ ಅವರಿಗೆ, ಯುನೈಟೆಡ್ ಆಸ್ಪತ್ರೆಯ ಸಿಬ್ಬಂದಿಯಾದ ನಾಗೇಶ್, ರವಿ ಮತ್ತಿತರಿಗೆ ಪದಕ ವಿತರಣೆ ಮಾಡಿ ಗೌರವಿಸಲಾಯಿತು.

ಯುನೈಟೆಡ್ ಆಸ್ಪತ್ರೆಯ ವತಿಯಿಂದ ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸಾ ಕಿಟ್ಟುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎನ್ ಸಿ ಸಿ ಅಧಿಕಾರಿ ವಿಜಯಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಪ್ರವೀಣ್ ನಾಯಕ್, ಎಸಿಪಿ (ಟ್ರಾಫಿಕ್) ಷರೀಫ್, ಯುನೈಟೆಡ್ ಆಸ್ಪತ್ರೆಯ ಆಡಳಿತಾಧಿಕಾರಿ ದಾವೂದ್ ಅಲಿ ಮತ್ತಿತರರು ಉಪಸ್ಥಿತರಿದ್ದರು. ಆರ್.ಜೆ.ಮಂಜು ಹಿರೋಳಿ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X