Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಹುತ್ವ ಸಂಸ್ಕೃತಿ ಜನಪದ...

ಕಲಬುರಗಿ | ಬಹುತ್ವ ಸಂಸ್ಕೃತಿ ಜನಪದ ಸಾಹಿತ್ಯಕ್ಕೆ ಜೀವಾಳ : ಡಾ.ಟಿ.ಎಂ.ಭಾಸ್ಕರ್

ವಾರ್ತಾಭಾರತಿವಾರ್ತಾಭಾರತಿ24 Feb 2025 5:40 PM IST
share
Photo of Program

ಕಲಬುರಗಿ : ನಮ್ಮ ಜನಪದರು ಬದುಕಿದ ರೀತಿ ನೀತಿಗಳಂತೆ ತಮ್ಮ ಜನಪದ ಸಾಹಿತ್ಯದಲ್ಲೂ ಬಹುತ್ವ ಸಂಸ್ಕೃತಿ ಅಳವಡಿಸಿಕೊಂಡಿದ್ದಾರೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ.ಭಾಸ್ಕರ್ ಹೇಳಿದರು.

ಹೆಚ್.ಕೆ.ಇ. ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ ʼಜನಪದ ಸಾಹಿತ್ಯದ ಬಹುತ್ವದ ಆಯಾಮಗಳು ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣʼಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃತಿ ಬಿಡುಗಡೆ ಮಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಗ್ರಾಮೀಣ ಪ್ರದೇಶದ ಕಲೆ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಕಲಾವಿದರ ಕೊಡುಗೆ ಅಪಾರವಾಗಿದೆ. ಜನಪದ ಕಲೆಯನ್ನು ಇಂದಿಗೂ ಉಳಿಸಿ ಬೆಳೆಸುತ್ತಿರುವ ಎಷ್ಟೋ ಕಲಾವಿದರು ಗೌರವ ಸಿಗದೇ ಹಿಂದೆ ಉಳಿದಿದ್ದಾರೆ. ಅಂಥವರನ್ನು ಗುರುತಿಸಿ ಸರಕಾರ, ವಿಶ್ವವಿದ್ಯಾಲಯಗಳು, ಸಂಘ-ಸಂಸ್ಥೆಗಳು ಪ್ರಶಸ್ತಿಯನ್ನು ನೀಡಿ ಗೌರವಿಸಿದರೆ ಆ ಪ್ರಶಸ್ತಿಯ ಗೌರವೂ ಹೆಚ್ಚುತ್ತದೆ. ಮತ್ತು ಕಲಾವಿದರನ್ನು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.

ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ರೋಹಿಣಿಕುಮಾರ ಎಸ್. ಹಿಳ್ಳಿ ಅಧ್ಯಕ್ಷತೆ ವಹಿಸಿದ್ದರು. ವಿಚಾರ ಸಂಕಿರಣದ ಸಂಚಾಲಕ ಪ್ರೊ.ಬಸಣ್ಣ ಎಸ್.ಕಾಗೆ, ಸಂಘಟನಾ ಕಾರ್ಯದರ್ಶಿ ಡಾ.ಪ್ರಾಣೇಶ ಎಸ್., ಸಂಯೋಜಕಿ ಚಂದ್ರಕಲಾ ಅಣಕಲ್, ಶಂಕರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಪ್ರಾಧ್ಯಾಪಕ ಮಾಧವ ಎಂ.ಕೆ., ಮೈತ್ರಾ ಹಳಿಮನಿ ವೇದಿಕೆ ಮೇಲಿದ್ದರು.

ನಂತರ ನಡೆದ ಗೋಷ್ಠಿಗಳಲ್ಲಿ ಜನಪದ ಸಾಹಿತ್ಯದ ಕಲೆಗಳು ಕುರಿತು ಪ್ರಾಧ್ಯಾಪಕ ಡಾ.ಗುರುಲಿಂಗಪ್ಪ ದಬಾಲೆ ಮಾತನಾಡಿದರು. ಸಾಹಿತಿ ಡಾ.ಜಯದೇವಿ ಗಾಯಕವಾಡ ಅಧ್ಯಕ್ಷತೆ ವಹಿಸಿದ್ದರು. ಆನಪದ ಮಹಾಕಾವ್ಯಗಳ ಬಹುತ್ವದ ಆಯಾಮಗಳು ಕುಇರಿತು ಡಾ.ಅಪ್ಪುಗೆರೆ ಸೋಮಶೇಖರ ಮಾತನಾಡಿದರು. ಡಾ.ಖಾಜಾವಳಿ ಈಚನಾಳ ಅಧ್ಯಕ್ಷತೆ ವಹಿಸಿದ್ದರು. ಆನಪದ ಕಲೆಯಾಗಿ ಯಕ್ಷಗಾನ ಕುರಿತು ಡಾ.ಮಾಧವ ಎಂ.ಕೆ. ಮಾತನಾಡಿದರು. ಡಾ.ಪಂಡಿತ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು.

ಜಾನಪದ ಕಲಾವಿದರಾದ ಶಿವಶರಣ ಕವಿ ದೇಗಾಂವ, ಶಶಿಕುಮಾರ ಕೆ.ಶರಣ ಸಿರಸಗಿ, ಡಾ.ಸಿದ್ರಾಮ ವಾಘ್ಮೋರೆ ಹಾಗೂ ಸಂಗಡಿಗರಿಂದ ವಿವಿಧ ಜನಪದ ಕಲೆಗಳ ಪ್ರದರ್ಶನ ಜರುಗಿತು.

ಪ್ರಮುಖರಾದ ಡಾ.ಶೀಲಾ ಬಿರಾದಾರ, ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್, ಸೋಮಶೇಕರ ನಂದಿಧ್ವಜ, ಎಂ.ಎನ್.ಸುಗಂಧಿ, ರಮೇಶ ಡಿ.ಬಡಿಗೇರ, ಶ್ರೀಶೈಲ ಮಾಡ್ಯಾಳೆ ಸೇರಿದಂತೆ ಅನೇಕರು ಯುವ ಸಂಶೋಧಕರು, ಉಪನ್ಯಾಸಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X