Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಾವ್ಯಕ್ಕೆ ಭಾವ ಬೆಸುಗೆ...

ಕಲಬುರಗಿ | ಕಾವ್ಯಕ್ಕೆ ಭಾವ ಬೆಸುಗೆ ಅಗತ್ಯ : ಆರತಿ ಕಡಗಂಚಿ

ವಾರ್ತಾಭಾರತಿವಾರ್ತಾಭಾರತಿ2 Nov 2025 7:00 PM IST
share
ಕಲಬುರಗಿ | ಕಾವ್ಯಕ್ಕೆ ಭಾವ ಬೆಸುಗೆ ಅಗತ್ಯ : ಆರತಿ ಕಡಗಂಚಿ

ಕಲಬುರಗಿ : ಕನ್ನಡ ಹೃದಯ ಭಾಷೆಯಾಗಲಿ. ಕೇವಲ ಅಕ್ಷರಗಳ ಜೋಡಣೆಯಿಂದ ಕಾವ್ಯವಾಗದು. ಅದಕ್ಕೆ ಭಾವ ಬೆಸುಗೆಯ ಅಗತ್ಯವಾಗಿದೆ ಎಂದು ಸೇಡಂ ನ ಲೇಖಕಿ ಆರತಿ ಕಡಗಂಚಿ ಹೇಳಿದರು.

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಸಂಭ್ರಮಕ್ಕೆ ಹೊಸ ಬಣ್ಣ ತುಂಬುವ ಪ್ರಯತ್ನವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಅಂಗಳದಲ್ಲಿ ರವಿವಾರ ಏರ್ಪಡಿಸಿದ ಕಾವ್ಯ ದೀಪ ವಿಶೇಷ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನಸ್ಸಿಗೆ ಮುದ ನೀಡುವ ಭಾವಗಳ ಸ್ಪರ್ಶವಾದಾಗ ಗಟ್ಟಿ ಸಾಹಿತ್ಯ ಹುಟ್ಟಲು ಸಾಧ್ಯ. ನಮ್ಮ ಬದುಕಿನ ತಲ್ಲಣಗಳಿಗೆ ಮಿಡಿಯುವ ಕಾವ್ಯಗಳು ಹೊಸ ಬದಲಾವಣೆಗೆ ಕಾರಣವಾಗುತ್ತವೆ. ಕನ್ನಡದ ಅಸ್ಮಿತೆ ಕಟ್ಟಿಕೊಟ್ಟ ಅನೇಕ ಕಾವ್ಯದ ಸಾಲುಗಳು ಈಗಲೂ ನಮ್ಮೆಲ್ಲರ ನಾಲಿಗೆ ಮೇಲೆ ಹರಿದಾಡುತ್ತಿವೆ. ಕಾವ್ಯ ಭಾವಬಿಂಬವಾಗಿರಲಿ ಎಂದರು.

ಕವಿಗೋಷ್ಠಿ ಉದ್ಘಾಟಿಸಿದ ನಿವೃತ್ತ ಪ್ರಾಧ್ಯಾಪಕ ರಾಘವೇಂದ್ರ ಗುಡಗುಂಟಿ, ಇಂದಿನ ಯುವ ಬರಹಗಾರರು ಹಿರಿಯ ಸಾಹಿತಿಗಳ ಕೃತಿಗಳನ್ನು ಹೆಚ್ಚೆಚ್ಚು ಓದಬೇಕು. ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡದ ಶ್ರೇಷ್ಠತೆ ಹಾಗೂ ಪರಂಪರೆಯನ್ನು ಹೊಸ ತಲೆಮಾರಿಗೆ ತಲುಪಿಸಲು ಪರಿಷತ್ತು ಪ್ರಯತ್ನಿಸಲಾಗುತ್ತಿದೆ. ಕನ್ನಡ ನಾಡು-ನುಡಿ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತಗೊಳಿಸದೇ ನಿತ್ಯ ಬದುಕಿನ ಮಂತ್ರವಾಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಷತ್ತು ಕಾರ್ಯಕ್ರಮಗಳು ರೂಪಿಸುತ್ತಿದೆ ಎಂದರು.

ಸತ್ಯಂ ಪಿಯು ಕಾಲೇಜಿನ ಟ್ರಸ್ಟಿ ಪ್ರೊ. ಅಮರೇಶ ಹಾಲವಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯದ್ ನಜಿರುದ್ದಿನ್ ಮುತ್ತವಲ್ಲಿ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಮಾತನಾಡಿದರು. ರಾಜೇಂದ್ರ ಮಾಡಬೂಳ, ಶಕುಂತಲಾ ಪಾಟೀಲ, ಜಯಶ್ರೀ ಜಮಾದಾರ, ಧರ್ಮರಾಜ ಜವಳಿ, ರಮೇಶ ಬಡಿಗೇರ, ಸಿದ್ಧಲಿಂಗ ಬಾಳಿ, ಪ್ರಭುಲಿಂಗ ಮೂಲಗೆ, ಶಿವಾನಂದ ಸುರವಸೆ, ಎಂ.ಎನ್.ಸುಗಂಧಿ, ನಾಗರಾಜ ಪಾಟೀಲ, ಅನೀಲಕುಮಾರ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕವಿಗಳಾದ ಪ್ರಭು ನಿಷ್ಠಿ, ಡಾ.ಸಂಗೀತಾ ಹಿರೇಮಠ, ರಾಜೇಂದ್ರ ಝಳಕಿ, ಪ್ರಭಾವತಿ ಮೇತ್ರೆ, ಡಾ.ಪರವೀನ್ ಸುಲ್ತಾನಾ, ಮಹಾಂತೇಶ ಕುಂಬಾರ, ಮಹಾಲಿಂಗಯ್ಯ ಸ್ವಾಮಿ, ವಿದ್ಯಾಧರ ಕಾಂಬಳೆ, ಶ್ರೀಕಾಂತ ಬಿರಾದಾರ, ಶಿವಯ್ಯಾ ಮಠಪತಿ, ಜ್ಯೋತಿ ಪಾಟೀಲ, ಗುರುದೇವಿ ರಾಯಚೂರ, ಅಂಜುನಾಥ ನಾಯ್ಕಲ್, ಮಂಜುಳಾ ಪಾಟೀಲ, ಆರ್.ಹೆಚ್. ಪಾಟೀಲ, ಶ್ರೀದೇವಿ ಪೊಲೀಸ್ ಪಾಟೀಲ ಅವರು ಕನ್ನಡ ನಾಡು-ನುಡಿ, ನೆಲ-ಜಲ ಗಳ ಕುರಿತು ಅವುಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಕಾವ್ಯ ದೀಪ ಬೆಳಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X