Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪ್ರತಿಯೊಂದು ವಿಚಾರಕ್ಕೂ...

Kalaburagi | ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದು ಆಡಳಿತ ಪಕ್ಷದ ಚಾಳಿ: ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ

"ಶಾಸಕ ಬಿ.ಆರ್.ಪಾಟೀಲ್ ಸತ್ಯ ಹೇಳಲಿ"

ವಾರ್ತಾಭಾರತಿವಾರ್ತಾಭಾರತಿ7 Sept 2026 4:38 PM IST
share
Kalaburagi | ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದು ಆಡಳಿತ ಪಕ್ಷದ ಚಾಳಿ: ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ

ಕಲಬುರಗಿ : ತಮ್ಮ ಅಸಹಾಯಕತೆಯನ್ನು ವಿರೋಧ ಪಕ್ಷಗಳ ಮೇಲೆ ಹೊರಿಸುವುದು ಹಾಗೂ ಪ್ರತಿಯೊಂದು ವಿಚಾರಕ್ಕೂ ಕೇಂದ್ರ ಸರ್ಕಾರವನ್ನು ಹೊಣೆ ಮಾಡುವುದು ಆಡಳಿತ ಪಕ್ಷದ ಶಾಸಕರ ಚಾಳಿಯಾಗಿದೆ ಎಂದು ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಅವರು ಶಾಸಕ ಬಿ.ಆರ್. ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳೆ ವಿಮೆ ಹಾಗೂ ಬರ ಘೋಷಣೆ ಕುರಿತು ಜನರನ್ನು ದಾರಿ ತಪ್ಪಿಸುವ ರೀತಿಯಲ್ಲಿ ಹೇಳಿಕೆ ನೀಡಲಾಗುತ್ತಿದೆ ಎಂದು ಆರೋಪಿಸಿದ ಅವರು, “ಬರ ಘೋಷಣೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರವೇ ಆಗಿದೆ ಎಂದು ಹೇಳುವವರು, ಒಂದೇ ವಾರದಲ್ಲಿ ಆ ಮಾನದಂಡಗಳು ಹೇಗೆ ಬದಲಾದವು ಎಂಬುದನ್ನು ಜನರಿಗೆ ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದರು.

ಕೇಂದ್ರದ ಮಾನದಂಡಗಳೇ ಅಂತಿಮವಾಗಿದ್ದರೆ, ಇಷ್ಟು ಕಡಿಮೆ ಅವಧಿಯಲ್ಲಿ ಬದಲಾವಣೆ ಹೇಗೆ ಸಾಧ್ಯವಾಯಿತು ಎಂಬುದಕ್ಕೂ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ತಮ್ಮ ದ್ರಾಕ್ಷಿ ಬೆಳೆಗೆ ಬೆಳೆ ವಿಮೆ ದೊರೆತಂತೆ, ಬಿ.ಆರ್. ಪಾಟೀಲ ಅವರ ಕುಟುಂಬದವರಾದ ಕಲ್ಯಾಣರಾವ ಪಾಟೀಲ ಅವರ ದ್ರಾಕ್ಷಿ ಬೆಳೆಯೂ ವಿಮೆ ಪಡೆದಿತ್ತು ಎಂದು ಗುತ್ತೇದಾರ ಹೇಳಿದರು.

ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ವಾಸ್ತವಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಅವರು ಸಲಹೆ ನೀಡಿದರು.

ಆಳಂದ ಪಟ್ಟಣ ಅಗಲೀಕರಣ ಕಾಮಗಾರಿಗೆ ತಮ್ಮ ಅವಧಿಯಲ್ಲೇ 11 ಕೋಟಿ ರೂ. ಮಂಜೂರು ಮಾಡಲಾಗಿತ್ತು ಎಂದು ತಿಳಿಸಿದ ಅವರು, ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯೂ ತಮ್ಮ ಶಾಸಕತ್ವದ ಅವಧಿಯಲ್ಲೇ ಮಂಜೂರಾಗಿತ್ತು ಎಂದರು.

ನಗರದ ಸಮೀಪ ಹೊಸ ಬಸ್ ನಿಲ್ದಾಣ ನಿರ್ಮಿಸುವ ಯೋಜನೆ ರೂಪಿಸಲಾಗಿದ್ದರೂ, ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಕಾಮಗಾರಿ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಾಖಲೆಗಳೊಂದಿಗೆ ಸಾರ್ವಜನಿಕ ಚರ್ಚೆಗೆ ತಾವು ಸಿದ್ಧವಿದ್ದು, ಜನರ ಮುಂದೆ ಸತ್ಯಾಸತ್ಯತೆ ಬಯಲಾಗಲಿ ಎಂದು ಗುತ್ತೇದಾರ ಸವಾಲು ಹಾಕಿದರು.

ಬರ ಘೋಷಣೆ ವಿಚಾರದಲ್ಲಿ ಆಡಳಿತ ಪಕ್ಷದವರು ದ್ವಂದ್ವ ನಿಲುವು ಹೊಂದಿದ್ದಾರೆ. ಒಂದು ಕಡೆ ಕೇಂದ್ರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ; ಮತ್ತೊಂದೆಡೆ ಜನರ ಒತ್ತಡ ಹೆಚ್ಚಾದಾಗ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದ್ದಾರೆ. ಈ ದ್ವಂದ್ವ ನಿಲುವನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಸುಭಾಷ್ ಆರ್. ಗುತ್ತೇದಾರ ಟೀಕಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X