Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಲಂಚ ಸ್ವೀಕಾರ ಪ್ರಕರಣ:...

Kalaburagi | ಲಂಚ ಸ್ವೀಕಾರ ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್‌ಗೆ ಐದು ವರ್ಷ ಜೈಲು, 60 ಸಾವಿರ ರೂ. ದಂಡ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ25 Nov 2026 5:10 PM IST
share
Kalaburagi | ಲಂಚ ಸ್ವೀಕಾರ ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್‌ಗೆ ಐದು ವರ್ಷ ಜೈಲು, 60 ಸಾವಿರ ರೂ. ದಂಡ

ಕಲಬುರಗಿ : ಪ್ರಕರಣವೊಂದರಲ್ಲಿ ದೂರುದಾರರಿಗೆ ಹಣ ಪಾವತಿಸಲು ಕಾಲಾವಕಾಶ ಕೊಡಿಸುವುದಾಗಿ ಹೇಳಿ 60 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 30 ಸಾವಿರ ರೂ. ಸ್ವೀಕರಿಸಿದ್ದ ಪೊಲೀಸ್ ಕಾನ್‌ಸ್ಟೇಬಲ್‌ಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭೀಮಾನಾಯಕ ಶಿಕ್ಷೆಗೆ ಗುರಿಯಾದ ಪೊಲೀಸ್ ಕಾನ್‌ಸ್ಟೇಬಲ್.

ಪ್ರಕರಣದ ವಿವರದ ಪ್ರಕಾರ, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಮಜೀದ್ ಮುಸ್ತಫಾ ಅವರು ಉದನೂರು ಗ್ರಾಮದ ಜಮೀನನ್ನು ಖರೀದಿಸಿ, 150 ನಿವೇಶನಗಳನ್ನಾಗಿ ರೂಪಿಸಿ ಮಾರಾಟ ಮಾಡಿದ್ದರು. ಈ ಪೈಕಿ ಇರ್ಷಾದ್ ಅಹ್ಮದ್ ಎಂಬುವರು ಮೂರು ನಿವೇಶನಗಳನ್ನು 15 ಸಾವಿರ ರೂ. ಗೆ ಖರೀದಿಸಿದ್ದರು. ಆದರೆ, ಆ ನಿವೇಶನಗಳು ರಸ್ತೆಗೆ ಒಳಪಟ್ಟಿದ್ದರಿಂದ ಹಣ ಹಿಂದಿರುಗಿಸುವಂತೆ ಇರ್ಷಾದ್ ಕೇಳಿದ್ದರು. ಇದಕ್ಕೆ ಕಾಲಾವಕಾಶ ಕೋರಿದ್ದ ಮುಸ್ತಫಾ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ದೂರುದಾರರಿಗೆ 10 ಲಕ್ಷ ರೂ. ಪಾವತಿಸಲು ಮೂರು ತಿಂಗಳ ಕಾಲಾವಕಾಶ ಕೊಡಿಸುವಂತೆ ಠಾಣಾಧಿಕಾರಿಗಳ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ಪ್ರತಿಯಾಗಿ ಕಾನ್‌ಸ್ಟೇಬಲ್ ಭೀಮಾನಾಯಕ 60 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 30 ಸಾವಿರ ರೂ. ನೀಡಲು ದೂರುದಾರರು ಒಪ್ಪಿಕೊಂಡಿದ್ದರು. ಲಂಚದ ಬೇಡಿಕೆಯನ್ನು ಮೊಬೈಲ್‌ನಲ್ಲಿ ದಾಖಲಿಸಿಕೊಂಡ ಅವರು, 2022ರ ಜೂ.9ರಂದು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಅಂದಿನ ಲೋಕಾಯುಕ್ತ ಡಿವೈಎಸ್ಪಿ ಸಂತೋಷ ಬನ್ನಟ್ಟಿ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್‌ ಅವರು ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಭೀಮಾನಾಯಕ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು. ಬಳಿಕ ಇನ್‌ಸ್ಪೆಕ್ಟರ್ ಅಕ್ಕಮಹಾದೇವಿ ಅವರು ತನಿಖೆ ಪೂರ್ಣಗೊಳಿಸಿ, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7(ಎ) ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ಎರಡೂ ಕಡೆಯ ವಾದ ಆಲಿಸಿದ ಬಳಿಕ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7(ಎ) ಅಡಿಯಲ್ಲಿ ಭೀಮಾನಾಯಕ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ನ.25ರಂದು ತೀರ್ಪು ಪ್ರಕಟಿಸಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್.ಚಾಂದಕವಠ ವಾದ ಮಂಡಿಸಿದ್ದರು. ಲೋಕಾಯುಕ್ತ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹಣಮಂತರಾಯ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಗುಂಡುರಾವ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದ್ದರು.

Tags

KalaburagiPolice ConstableBribery Case
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X