Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪೊಲೀಸ್ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ...

ಪೊಲೀಸ್ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ದ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ28 April 2026 8:32 PM IST
share
ಪೊಲೀಸ್ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ದ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಕಲಬುರಗಿ:‌ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ

ಕಲಬುರಗಿ: ನಾಡಿನ‌ಲ್ಲಿ‌ ಶಾಂತಿ ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿರುವ ಪೊಲೀಸ್ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ಕಲಬುರಗಿ ನಗರದ ಸಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 20.88 ಕೋಟಿ ವೆಚ್ಚದ 72 ಪೊಲೀಸ್ ವಸತಿ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕಲಬುರಗಿ ನಗರದಲ್ಲಿ 24 ಪೊಲೀಸ್ ವಸತಿ ಗೃಹ ಕಟ್ಟಡಗಳು, ಅಫಜಲಪುರ ಪಟ್ಟಣದಲ್ಲಿ 24, ದೇವಲ ಗಾಣಗಾಪುರದಲ್ಲಿ 12, ಆಳಂದ ಪಟ್ಟಣದಲ್ಲಿ 12 ಪೊಲೀಸ್ ವಸತಿ ಗೃಹ ಕಟ್ಟಡಗಳನ್ನು ಇಂದಿಲ್ಲಿ ಪೊಲೀಸ್ ಸಿಬ್ಬಂದಿಗೆ ಸಮರ್ಪಿಸಲಾಗಿದೆ ಎಂದರು.

ಬ್ರಿಟಿಷರ ಕಾಲದ ಹಳೆಯ ‘ಪೊಲೀಸ್ ಲೈನ್' ಮನೆಗಳ ಬದಲಿಗೆ, ಆಧುನಿಕ ಸೌಲಭ್ಯವುಳ್ಳ ' ಪೊಲೀಸ್ ಗೃಹ' ಯೋಜನೆಯಡಿ ರಾಜ್ಯಾದ್ಯಂತ ಈಗಾಗಲೇ 40,712 ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 1,830 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಸಂಚಾರಿ ನಿರ್ವಹಣೆ ಸೇರಿದಂತೆ ಇಲಾಖೆಯ ಕೆಲಸಗಳಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಮಾಡರ್ನ್ ಫೆಸಿಲಿಟಿಗಳನ್ನು ಅಳವಡಿಸಿಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮಳೆ, ಬಿಸಿಲು ಎನ್ನದೆ ಹಗಲಿರುಳು ಶ್ರಮಿಸುವ ಪೊಲೀಸರು ಮತ್ತು ಅವರ ಕುಟುಂಬದ ಹಿತರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಪೋಷಕರಿಗೆ ನೆರವಾಗಲು ವಸತಿ ಸೌಕರ್ಯ ಅತ್ಯಗತ್ಯ ಎಂದರು.

ಪ್ರಸ್ತುತ ಇಲಾಖೆಯಲ್ಲಿ ಸುಮಾರು 15,000 ರಿಂದ 16,000 ಹುದ್ದೆಗಳು ಖಾಲಿ ಇವೆ. ಮೊದಲ ಹಂತದಲ್ಲಿ ಸುಮಾರು 8,000 ಹುದ್ದೆಗಳ ಭರ್ತಿಗೆ ಮುಂದಿನ 10 ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವರು ಇದೇ‌ ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪೊಲೀಸ್ ಇಲಾಖೆಯಲ್ಲಿ ತರುತ್ತಿರುವ ಅನೇಕ ಬದಲಾವಣೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ಇಡೀ ದೇಶದಲ್ಲೇ ಕರ್ನಾಟಕ ಪೊಲೀಸ್ ಇಲಾಖೆ ಉತ್ತಮ ಸ್ಥಾನದಲ್ಲಿರಲು ಅವರ ದೂರದೃಷ್ಟಿ ಮತ್ತು ನಿಸ್ವಾರ್ಥ ಸೇವೆ ಕಾರಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ ದಕ್ಷಿಣ ಕ್ಷೇತ್ರದ ಕೋಟನೂರ 'ಡಿ' ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಇಲ್ಲಿ ಒಂದು ಪೊಲೀಸ್ ಸ್ಟೇಷನ್ ಸ್ಥಾಪಿಸಬೇಕು ಹಾಗೂ ಪಟ್ಟಣ ಗ್ರಾಮದಲ್ಲಿ ಒಂದು ಔಟ್‌ಪೋಸ್ಟ್ ಸ್ಟೇಷನ್ (ಪೊಲೀಸ್ ಹೊರಠಾಣೆ) ಸ್ಥಾಪಿಸಬೇಕೆಂದು ಸಚಿವರಲ್ಲಿ ಬೇಡಿಕೆ ಇಟ್ಟರು. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಗೃಹ ಸಚಿವರು, ಈಗಾಗಲೇ ವಿಧಾನಸಭೆಯಲ್ಲಿ ಈ ಬಗ್ಗೆ ಭರವಸೆ ನೀಡಿರುವುದನ್ನು ಸ್ಮರಿಸಿದರು. ಕ್ಷೇತ್ರದ ಜನರ ಬೇಡಿಕೆಗಳನ್ನು ಆದ್ಯತೆಯ ಮೇಲೆ ಈಡೇರಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜಾ ಫಾತಿಮಾ, ಅಫಜಲಪುರ ಶಾಸಕ ಎಂ.ವೈ. ಪಾಟೀಲ್, ವಿಧಾನ ಪರಿಷತ್ ಶಾಸಕರುಗಳಾದ ಜಗದೇವ್ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯದ್ ಮೊಹಮ್ಮದ್ ಚಿಸ್ತಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ರಾಜೀವ ಜಾನೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಿಕಾ ಪರಮೇಶ್ವರ್, ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾ ನಿರೀಕ್ಷಕರು ಡಾ. ಎಂ.ಎಸ್. ಸಲೀಂ, ಈಶಾನ್ಯ ವಲಯದ ಡಿ.ಐ.ಜಿ ಶಾಂತನು ಸಿನ್ಹಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಬೀದರ್ ಎಸ್.ಪಿ. ಪ್ರದೀಪ್ ಗುಂಟಿ, ಯಾದಗಿರಿ ಎಸ್.ಪಿ. ಪೃಥ್ವಿಕ್ ಶಂಕರ್ ಸೇರಿದಂತೆ ಇಲಾಖೆಯ ಪ್ರಮುಖ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಸ್ವಾಗತಿಸಿದರು.





Tags

Kalaburagipolice quartersG Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X