Kalaburagi | ಸೆ.5ರಂದು ಕಮಲಾಪುರದಲ್ಲಿ ಪ್ರಜಾ ಸೇವೆ ಸಭೆ

ಕಲಬುರಗಿ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಸೆ.5 ರಂದು ಬೆಳಿಗ್ಗೆ 10.30 ಗಂಟೆಗೆ ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ.
ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆ ಮತ್ತು ಸ್ಥಳೀಯ ಶಾಸಕ ಬಸವರಾಜ ಮತ್ತಿಮೂಡ ಅವರ ನೇತೃತ್ವದಲ್ಲಿ ನಡೆಯುವ ಈ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಮನವಿ ಮಾಡಿದ್ದಾರೆ.
Next Story




