Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೆ.5ರಂದು ಕಮಲಾಪುರದಲ್ಲಿ...

Kalaburagi | ಸೆ.5ರಂದು ಕಮಲಾಪುರದಲ್ಲಿ ‘ಪ್ರಜಾ ಸೇವೆ’ ಆಂದೋಲನ: ಸಕಲ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 5:27 PM IST
share
Kalaburagi | ಸೆ.5ರಂದು ಕಮಲಾಪುರದಲ್ಲಿ ‘ಪ್ರಜಾ ಸೇವೆ’ ಆಂದೋಲನ: ಸಕಲ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ: ರಾಜ್ಯ ಸರ್ಕಾರದ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಮೊದಲ ಸಭೆಯನ್ನು ಸೆಪ್ಟೆಂಬರ್ 5ರಂದು ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ 19 ಗ್ರಾಮ ಪಂಚಾಯಿತಿಗಳವಾರು ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಿ ದೂರುಗಳು ಹಾಗೂ ಅರ್ಜಿಗಳನ್ನು ಸ್ವೀಕರಿಸಬೇಕು. ಕೃಷಿ, ತೋಟಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಇಲಾಖೆಗಳು ತಮ್ಮ ಯೋಜನೆಗಳ ಕುರಿತು ಮಾಹಿತಿ ನೀಡಲು ಪ್ರತ್ಯೇಕ ಸ್ಟಾಲ್‌ಗಳನ್ನು ತೆರೆಯಬೇಕು ಎಂದು ಸೂಚಿಸಿದರು.

ಪ್ರತಿ ಸ್ಟಾಲ್‌ನಲ್ಲಿ ಕಂಪ್ಯೂಟರ್ ಆಪರೇಟರ್ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ಇಂಟರ್‌ನೆಟ್ ಮತ್ತು ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ ಹಾಗೂ ಶಾಮಿಯಾನ ಸೌಲಭ್ಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮತ್ತು ಪೊಲೀಸ್ ಭದ್ರತೆಯನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದ ಅವರು, ಕಾರ್ಯಕ್ರಮದ ಸಂಪೂರ್ಣ ಬ್ಲೂಪ್ರಿಂಟ್ ಅನ್ನು ಗುರುವಾರ ಸಂಜೆಯೊಳಗೆ ಸಿದ್ಧಪಡಿಸುವಂತೆ ಇವೆಂಟ್ ಮ್ಯಾನೇಜರ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಸಾರ್ವಜನಿಕರಿಗೆ ಅರ್ಜಿ ಬರೆಯಲು ಸಹಾಯ ಮಾಡುವ ಹಾಗೂ ಜನರನ್ನು ನಿಯಂತ್ರಿಸಲು ಅಗತ್ಯ ಸಂಖ್ಯೆಯ ಸ್ವಯಂಸೇವಕರನ್ನು ನಿಯೋಜಿಸಬೇಕು. ಜಾಗೃತಿ ಮೂಡಿಸುವ ಸ್ಟಾಲ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿರುವ ಇಲಾಖೆಗಳು ಗುರುವಾರ ಸಂಜೆಯೊಳಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಕಮಲಾಪುರ ತಹಶೀಲ್ದಾರ್ ಮುಹಮ್ಮದ್ ಮೊಹಸೀನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

KamalapuraKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X